ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ -ಏನಿದು ವಿವಾದ..?

author-image
Ganesh
Updated On
ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ -ಏನಿದು ವಿವಾದ..?
Advertisment
  • ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ನಿರ್ಣಯ
  • ಶೇ.10ರಷ್ಟಿರುವ ಮೀಸಲಾತಿ ಶೇ.15ಕ್ಕೆ ಹೆಚ್ಚಿಸುವ ಬಗ್ಗೆ ನಿರ್ಧಾರ
  • ಮುಸ್ಲಿಂ, ಜೈನರು, ಕ್ರೈಸ್ತರು ಸೇರಿ ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯ

ಬೆಂಗಳೂರು: ಗುತ್ತಿಗೆ ಆಯ್ತು.. ಈಗ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಸಿದ್ದರಾಮಯ್ಯ ಸರ್ಕಾರ ನಿರ್ಣಯ ಕೈಗೊಂಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಸರ್ಕಾರ ಇವತ್ತು ಸಚಿವ ಸಂಪುಟ ಸಭೆ ನಡೆಸಿತು. ಈ ಸಭೆಯಲ್ಲಿ ಶೇ.10ರಷ್ಟಿರುವ ಮೀಸಲಾತಿಯನ್ನು ಶೇ.15ಕ್ಕೆ ಹೆಚ್ಚಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಮುಸ್ಲಿಂ, ಜೈನರು, ಕ್ರೈಸ್ತರು ಸೇರಿ ಎಲ್ಲಾ ಅಲ್ಪಸಂಖ್ಯಾತರಿಗೂ ಇದು ಅನ್ವಯ ಆಗಲಿದೆ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡುವುದು ಸರ್ಕಾರದ ಉದ್ದೇಶವಾಗಿದೆ.

ಇದನ್ನೂ ಓದಿ: ಬುಮ್ರಾ ಸ್ಥಾನ ತುಂಬುವ ಶಕ್ತಿ ಇರೋದು ಕನ್ನಡಿಗನಿಗೆ ಮಾತ್ರ.. ಟ್ರಬಲ್​​​ನಲ್ಲಿರೋ ತಂಡಕ್ಕೆ ದೊಡ್ಡ ಭರವಸೆ

ಹೆಚ್​.ಕೆ.ಪಾಟೀಲ್ ಏನಂದ್ರು..?

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್​​ಕೆ ಪಾಟೀಲ್, ಸಾಚಾರ್ ಕಮಿಟಿ ವರದಿಯನ್ನೂ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯ ಆಗಲಿದೆ. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳು ಇವೆ. ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯ ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಎಂದಿದ್ದಾರೆ.

ಇದನ್ನೂ ಓದಿ: ಅಪ್ಸರಕೊಂಡ ವನ್ಯಜೀವಿ ಧಾಮ ಎಂದು ಘೋಷಣೆ; ಮಾವು ಬೆಳೆಗಾರರಿಗೆ ಗುಡ್​ನ್ಯೂಸ್

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment