ಬಿಜೆಪಿ ಮತ್ತು ಜೆಡಿಎಸ್ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ
ಮುಖ್ಯಮಂತ್ರಿ ಕುರ್ಚಿ ಬಗ್ಗೆ ಇಲ್ಲಸಲ್ಲದನ್ನು ಮಾತನಾಡುತ್ತಿದ್ದಾರೆ- ಸಿಎಂ
ಡಿ.ಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮಾತನಾಡಿದ್ದ ಕುಮಾರಸ್ವಾಮಿ
ಮೈಸೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗೋದಾದ್ರೆ ಜೆಡಿಎಸ್ ಶಾಸಕರು ಸಂಪೂರ್ಣ ಬೆಂಬಲ ಎನ್ನುವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಲ್ಲಿ ಏನೂ ಇಲ್ಲ ಎಲ್ಲ ವ್ಯಂಗ್ಯ ಎಂದು ಅಲ್ಲಗಳೆದಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಮತ್ತು ಜೆಡಿಎಸ್ ಇಬ್ಬರು ರಾಜಕೀಯವಾಗಿ ಹತಾಶರಾಗಿದ್ದಾರೆ. ಈ ಹತಾಶೆಯಲ್ಲಿಯೇ ಸಿಎಂ ಕುರ್ಚಿಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಈ ಹೇಳಿಕೆಯಲ್ಲಿ ವ್ಯಂಗ್ಯ ಬಿಟ್ಟರೇ ಇನ್ನೇನಿದೆ ಹೇಳಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಈ ಹಿಂದೆ ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಮಾತಿನಲ್ಲಿ ವ್ಯಂಗ್ಯ ಬಿಟ್ಟರೇ ಬೇರೆ ಏನೂ ಇಲ್ಲ. ಅಧಿಕಾರ ಇಲ್ಲದೇ ಬಿಜೆಪಿ, ಜೆಎಎಸ್ ನಾಯಕರು ಹತಾಶೆಯಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಇದ್ದರೂ ಮುಖ್ಯಮಂತ್ರಿ ಕುರ್ಚಿ ಬಗ್ಗೆ ಏನೇನೋ ಹೇಳುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ