Mysore Dasara: ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭ.. ನಂದಿಧ್ವಜ ಪೂಜೆ ಎಷ್ಟು ಗಂಟೆಗೆ? ಇಲ್ಲಿದೆ ಮಾಹಿತಿ

author-image
AS Harshith
Updated On
Mysore Dasara: ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭ.. ನಂದಿಧ್ವಜ ಪೂಜೆ ಎಷ್ಟು ಗಂಟೆಗೆ? ಇಲ್ಲಿದೆ ಮಾಹಿತಿ
Advertisment
  • ಬೆಳಗ್ಗೆ 9 ಗಂಟೆಗೆ ಅಂಬಾವಿಲಾಸದಲ್ಲಿ ವಜ್ರಮುಷ್ಠಿ ಕಾಳಗ
  • 12 ಗಂಟೆಗೆ ಭುವನೇಶ್ವರಿ ದೇಗುಲದಲ್ಲಿ ಪೂಜೆ
  • ಚಾಮುಂಡೇಶ್ವರಿ ತಾಯಿಯನ್ನು ಹೊರಲಿರುವ ಅಭಿಮನ್ಯು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬೆಳಗ್ಗೆಯಿಂದಲೇ ಪೂಜೆ ಕೈಂಕರ್ಯಗಳು ಆರಂಭಗೊಂಡಿದೆ. ಬೆಳಗ್ಗೆ 9 ಗಂಟೆಗೆ ಅಂಬಾವಿಲಾಸದಲ್ಲಿ ವಜ್ರಮುಷ್ಠಿ ಕಾಳಗ ಶುರುವಾಗಲಿದೆ.

ಬೆಳಗ್ಗೆ 9.30ಕ್ಕೆ ರಾಜರ ಬೆಳ್ಳಿ ರಥಕ್ಕೆ ಪೂಜೆ ನಡೆಯಲಿದ್ದು, 11 ಗಂಟೆಗೆ ಯದುವೀರ್ ವಿಜಯ ಯಾತ್ರೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆಗೆ ಭುವನೇಶ್ವರಿ ದೇಗುಲದಲ್ಲಿ ಪೂಜೆ ನಡೆಯಲಿದೆ. ನಂತರ ಯದುವೀರ್ ಒಡೆಯರ್​ರಿಂದ ಬನ್ನಿ ಪೂಜೆ ನೆರವೇರಲಿದೆ.

publive-image

ಅರಮನೆಯ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 1.45 ರಿಂದ 2.08 ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40ರಿಂದ 5ರ ಸಮಯದಲ್ಲಿ ವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗುವ ಅಧಿದೇವತೆ ಚಾಮುಂಡೇಶ್ವರಿ ತಾಯಿಯನ್ನು ಹೊತ್ತು ಕ್ಯಾಪ್ಟನ್ ಅಭಿಮನ್ಯು ಮೈಸೂರಿನ ಬೀದಿ ಬೀದಿಗಳಲ್ಲಿ ಸಂಚರಿಸಲಿದ್ದಾನೆ. ಅಭಿಮನ್ಯುಗೆ 14 ಆನೆಗಳು ಸಾಥ್​ ನೀಡಲಿವೆ. ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಪ್ರದರ್ಶಿಸುತ್ತಾ ರಾಜಪಥದಲ್ಲಿ ಸಾಗಲು ಕಲಾತಂಡಗಳು, ಸ್ತಬ್ಧಚಿತ್ರಗಳು ಸಜ್ಜಾಗಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment