newsfirstkannada.com

ಮುಡಾ ಹಗರಣ ಬಯಲು ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ವರ್ಗಾವಣೆ

Share :

Published July 5, 2024 at 11:29am

Update July 5, 2024 at 11:31am

  ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ವರ್ಗಾವಣೆ

  ಡಿಸಿ ಬರೆದಿರುವ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆ

  ಮೈಸೂರಿಗೆ ನೂತನ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ್ ರೆಡ್ಡಿ ನೇಮಕ

ಮೈಸೂರು: ಮುಡಾ ಹಗರಣದ ಬಗ್ಗೆ ಪತ್ರ ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ‌ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಕಾಂತ ರೆಡ್ಡಿಯನ್ನು ನೇಮಕ ಮಾಡಿದೆ.

ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮಿ ಕಾಂತರೆಡ್ಡಿ ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ. ಬೆಂಗಳೂರಿನ ಕೆಯುಐಡಿಎಫ್​ಸಿಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಲಕ್ಷ್ಮಿಕಾಂತ್​ ರೆಡ್ಡಿಯನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಮುಡಾ ಹಗರಣದ ಬಗ್ಗೆ ಡಿಸಿ ಕೆ.ವಿ ರಾಜೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದರು. ಮುಡಾದ 50:50 ಸೈಟು ವಿಷಯದಲ್ಲಿ ಸರ್ಕಾರದ ಕಾರ್ಯದರ್ಶಿಗೂ ಪತ್ರ ಬರೆದಿದ್ದರು. ಡಿಸಿ ಪತ್ರ ಬೆಳಕಿಗೆ ಬಂದ ಮರುದಿನವೇ ವರ್ಗಾವಣೆಯಾಗಿದೆ. ಕೆವಿ ರಾಜೇಂದ್ರ ಸೇರಿದಂತೆ ಒಟ್ಟು 21 ಐಎಎಸ್​ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಏನಿದು ಮುಡಾ ಹಗರಣ..?
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೇ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು, ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಇವೆ.

ಇದನ್ನೂ ಓದಿ:ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ.. ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮುಡಾ ಹಗರಣ ಬಯಲು ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ವರ್ಗಾವಣೆ

https://newsfirstlive.com/wp-content/uploads/2024/07/MYS-DC.jpg

Load More