/newsfirstlive-kannada/media/post_attachments/wp-content/uploads/2025/07/mys-honeytrap.jpg)
ಮೈಸೂರು: ಹನಿಟ್ರ್ಯಾಪ್ ಮಾಡಿ ತಲೆ ಮರೆಸಿಕೊಂಡಿದ್ದ ಯುವ ಜೋಡಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಂದರ ಯುವತಿಯನ್ನ ಮುಂದೆ ಬಿಟ್ಟು ಟ್ರ್ಯಾಪ್ ಮಾಡುತ್ತಿದ್ದ ಇಬ್ಬರನ್ನ ಕೇರಳದ ಕಣ್ಣೂರಿನ ಲಾಡ್ಜ್ನಲ್ಲಿ ಅರೆಸ್ಟ್ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ಗೆ ಹನಿಟ್ರ್ಯಾಪ್ ಮಾಡಿ ಈ ಜೋಡಿ ಎಸ್ಕೇಪ್ ಆಗಿತ್ತು. ಪ್ರಕರಣ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಯುವತಿ ಸೇರಿದಂತೆ ಆರೋಪಿ ಮೂರ್ತಿಯನ್ನ ಅರೆಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಇದೇ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಶಿವಣ್ಣನನ್ನ ಅರೆಸ್ಟ್ ಮಾಡಿದ್ದ ಪೊಲೀಸರು ಅವರನ್ನ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: ಕಿಪ್ಪಿ ಕೀರ್ತಿಗಾಗಿ ಕೋಬ್ರಾ VS ಕಪ್ಪೆ ಕಿತ್ತಾಟ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಲವ್ ಸ್ಟೋರಿ..!
ಕಳೆದ ಒಂದು ತಿಂಗಳ ಹಿಂದೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ನನ್ನು ಬಳಸಿಕೊಂಡು ಆತನ ಬಳಿ 10 ಲಕ್ಷಕ್ಕೆ ಜೋಡಿ ಬೇಡಿಕೆ ಇಟ್ಟಿತ್ತು. ಈ ಸಂಬಂಧ ಬೈಲಕುಪ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆ ಬೆನ್ನಲ್ಲೇ ಯುವತಿ ಸೇರಿದಂತೆ ಆರೋಪಿ ಮೂರ್ತಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಇದೇ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪೊಲೀಸ್ ಪೇದೆ ಶಿವಣ್ಣನನ್ನ ಅರೆಸ್ಟ್ ಮಾಡಿದ್ದ ಪೊಲೀಸರು ಅವರನ್ನ ಜೈಲಿಗಟ್ಟಿದ್ದಾರೆ.
ಇನ್ನೂ, ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿದ್ದ ಕವನ ಮತ್ತು ಸೈಫ್ ಆರೋಪಿಗಳನ್ನು ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಬೈಲಕುಪ್ಪೆ ಪಿಎಸ್ಐ ರವಿಕುಮಾರ್, ಸಿಬ್ಬಂದಿಗಳಾದ ವಿಜಯ ಪವರ್, ಮುದ್ದುರಾಜ್, ಮಹಿಳಾ ಪೊಲೀಸ್ ಪೇದೆ ಅಶ್ವಿತಾ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಲಕುಪ್ಪೆ ವ್ಯಾಪ್ತಿಯಲ್ಲಿ ಹನಿ ಟ್ರ್ಯಾಪ್ ಮಾಡಿದ ಸ್ಥಳಗಳಿಗೆ ಆರೋಪಿಗಳನ್ನು ಬೈಲಿಕುಪ್ಪೆ ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ