newsfirstkannada.com

ಗಟ್ಟಿ ಪಿಂಡ ನಾನು.. ಬಿಜೆಪಿ ನಾಯಕರ ಮೇಲೆ ಗುಡುಗಿದ ಮೈಸೂರು ಸಂಸದ ಪ್ರತಾಪ ಸಿಂಹ; ಏನಂದ್ರು?

Share :

Published March 12, 2024 at 1:04pm

Update March 12, 2024 at 1:05pm

    ‘ಸಿದ್ದರಾಮಯ್ಯ ‌ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ಪ್ರತಾಪ ಸಿಂಹ’

    ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೇ ಹೊರತು..

    ಕೈ ಮುಗಿದು ಬೇಡಿಕೊಳ್ಳುತ್ತೇನೆ ಲೀಡರ್‌ಗಳ ಹಿಂದೆ ಹೋಗಬೇಡಿ

ಮೈಸೂರು: ಹ್ಯಾಟ್ರಿಕ್ ಗೆಲುವಿನ ಕನಸು ಕಾಣ್ತಿದ್ದ ಸಂಸದ ಪ್ರತಾಪ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್‌ ಶಾಕ್ ಕೊಟ್ಟಿದೆ. ಮೈಸೂರು-ಕೊಡಗು ಕ್ಷೇತ್ರದಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ ಸಿಂಹ ಅವರಿಗೆ ಟಿಕೆಟ್ ಮಿಸ್ ಆಗುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಬೇಸರ ಹೊರ ಹಾಕಿರುವ ಅವರು ಸ್ವಪಕ್ಷದ ನಾಯಕರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಲ್ಲಿ ನ್ಯೂಸ್ ಫಸ್ಟ್‌ ಜೊತೆ ಮುಕ್ತವಾಗಿ ಮಾತನಾಡಿರುವ ಸಂಸದ ಪ್ರತಾಪ ಸಿಂಹ ಅವರು ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ‌ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ನಾನು. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪ್ರತಾಪ್​ ಸಿಂಹ ಭಾವುಕ.. ಕೊಡಗು-ಮೈಸೂರು ಜನರಿಗೆ ಧನ್ಯವಾದ ಹೇಳಿದ ಯಂಗ್ ಲಯನ್! ವಿದಾಯ​ ಹೇಳಿದ್ರಾ?

ಈ ಹಿಂದೆ ಬಿಜೆಪಿಯಿಂದ ಗೆದ್ದವರು ಪಕ್ಷವನ್ನು ಹೇಗೆ ಕಟ್ಟಿದ್ರು ಎಷ್ಟು ಜನರನ್ನು ಬೆಳೆಸಿದ್ದಾರೆ ಹೇಳಿ. ನಾನು ರಿಯಲ್ ಎಸ್ಟೇಟ್ ಮಾಡಲಿಲ್ಲ, ಕಮಿಷನ್ ಪಡೆದಿಲ್ಲ. ಬಟ್ಟಂಗಿಗಳನ್ನು ಕಟ್ಟಿಕೊಂಡು ಓಡಾಡಲಿಲ್ಲ. ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಲಿಲ್ಲ. ಅಭಿವೃದ್ಧಿ ಮಾತ್ರ ಮಾಡಿದ್ದೇನೆ ಎಂದು ಪ್ರತಾಪ ಸಿಂಹ ಹೇಳಿದ್ದಾರೆ.

ಮೈಸೂರು-ಕೊಡಗು ಬಿಜೆಪಿಯ ಭದ್ರಕೋಟೆ. ಇವತ್ತು ನನಗೆ ಟಿಕೆಟ್ ಕೊಟ್ರೆ ಮೂರು ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಆಲ್ ಪಾರ್ಟಿ ಮೆಂಬರ್ ನಾನು. ಒಳ್ಳೆಯ ಕೆಲಸ ಮಾಡಿದ್ದೇನೆ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಅವಕಾಶ ಸಿಕ್ಕರೆ ಕೊಡಗಿನ ಜನರ ಋಣ ತೀರಿಸುತ್ತೇನೆ. ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೇ ಹೊರತು ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು. ಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಯಾರು ತಲೆ ಕಡೆಸಿಕೊಳ್ಳಬೇಡಿ. ಗಟ್ಟಿ ಪಿಂಡ ನಾನು. ಯಾವ ಹಿನ್ನೆಲೆ ಇಲ್ಲದೆ ಇಲ್ಲಿ ತನಕ ಬಂದಿದ್ದೇನೆ. ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ. ಕೈ ಮುಗಿದು ಬೇಡಿಕೊಳ್ಳುತ್ತೇನೆ ಲೀಡರ್‌ಗಳ ಹಿಂದೆ ಹೋಗಬೇಡಿ. ಪಕ್ಷದ ಜತೆ ಹೋಗಿ. ಅಪಪ್ರಚಾರ ಮಾಡಬೇಡಿ. ನಾನೇ ಆಗಲಿ ಮತ್ತೊಬ್ಬರೇ ಆಗಲಿ ಪಕ್ಷದ ಅಭ್ಯರ್ಥಿಯಲ್ಲಿ ಗೆಲ್ಲಿಸೋಣ. ಮುಂದಿನ ದಿನಗಳಲ್ಲಿ ಗಾಸಿಪ್‌ಗಳನ್ನು ಸೃಷ್ಟಿಸಬೇಡಿ. ನಾನು ಪಲಾನಯನ ವಾದಿಯಲ್ಲ. ನಿಮ್ಮ ಜತೆ ನಾನು ಸದಾ ಇರುತ್ತೇನೆ. ಜನರ ಪ್ರೀತಿಯನ್ನು ಸಂಪಾದನೆ ಮಾಡಿದ್ದೇನೆ ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗಟ್ಟಿ ಪಿಂಡ ನಾನು.. ಬಿಜೆಪಿ ನಾಯಕರ ಮೇಲೆ ಗುಡುಗಿದ ಮೈಸೂರು ಸಂಸದ ಪ್ರತಾಪ ಸಿಂಹ; ಏನಂದ್ರು?

https://newsfirstlive.com/wp-content/uploads/2024/03/Mysore-MP-Pratap-Simha.jpg

Load More