/newsfirstlive-kannada/media/post_attachments/wp-content/uploads/2024/05/jakcbdc.jpg)
ನ್ಯೂಸ್​​ಫಸ್ಟ್​ ವಿಶೇಷ ವರದಿ: ಕಲುಷಿತ ನೀರು ಸೇವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ. 35 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕನಕರಾಜು (23) ಸಾವನ್ನಪ್ಪಿದ ಯುವಕ. ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡವರನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈ ದುರ್ಘಟನೆಯ ಬೆನ್ನಲ್ಲೇ ಕೆ.ಸಾಲುಂಡಿ ಗ್ರಾಮಕ್ಕೆ ಡಿಎಚ್ ಓ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಗ್ರಾಮದಲ್ಲಿ ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ: ಭೀಕರ ಅಪಘಾತ; ಕಣಿವೆಗೆ ಉರುಳಿ ಬಿದ್ದ ಗೂಡ್ಸ್​ ವಾಹನ; 18 ಜನರು ಸಾವು
ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬಳಿಕ ಡಿಎಚ್ ಓ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಸದ್ಯ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಜರುಗಿಸಲಾಗಿದೆ. ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಜತೆಗೆ ಸುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದಿಟ್ಟುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಒಂದು ಲಕ್ಷ ಪರಿಹಾರ
ಕಲುಷಿತ ನೀರು ಸೇವಿಸಿ ಮೃತಪಟ್ಟ ಕನಕರಾಜು ಮೃತ ಕುಟುಂಬಕ್ಕೆ ಮುಡಾ ಅಧ್ಯಕ್ಷ ಮರೀಗೌಡ ಒಂದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us