newsfirstkannada.com

ಇಂದಿರಾನಗರ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ.. ಐವರಿಗೆ ಗಂಭೀರ ಗಾಯ

Share :

Published March 1, 2024 at 2:23pm

Update March 1, 2024 at 2:25pm

  ಇಂದಿರಾನಗರ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ

  ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ದೌಡು

  ಕೆಫೆಗೆ ಅಪರಿಚಿತ ವ್ಯಕ್ತಿಯೊಬ್ಬ ತಂದಿದ್ದ ಬ್ಯಾಗ್‌ನಲ್ಲಿ ಏನಿತ್ತು?

ಬೆಂಗಳೂರಿನ ಇಂದಿರಾನಗರ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆಗೆ ಬಹಳಷ್ಟು ಹಾನಿ ಸಂಭವಿಸಿದೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ತಂದಿದ್ದ ಬ್ಯಾಗ್‌ನಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಸಿಲಿಂಡರ್ ಕೂಡ ಬ್ಲಾಸ್ಟ್‌ ಆಗಿರುವ ಸಂದೇಹ ವ್ಯಕ್ತವಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬನ ಬ್ಯಾಗ್‌ನಲ್ಲಿ ಇಟ್ಟಿದ್ದ ವಸ್ತುಗಳು ಪತ್ತೆಯಾಗಿದ್ದು, ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆಗೆ ಭಾರೀ ಹಾನಿ ಆಗಿದೆ. ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯ ಮುಂದುವರಿದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿರಾನಗರ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ.. ಐವರಿಗೆ ಗಂಭೀರ ಗಾಯ

https://newsfirstlive.com/wp-content/uploads/2024/03/Bangalore-Blast.jpg

Load More