/newsfirstlive-kannada/media/post_attachments/wp-content/uploads/2024/10/Library.jpg)
ಮೈಸೂರು ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರು ಭಾಗದಲ್ಲಿ ಮತ್ತು ಕರ್ನಾಟಕ ಸರ್ಕಾರದಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಮೈಸೂರು ಗ್ರಾಮ ಪಂಚಾಯತ್ 19 ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 30ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಮೈಸೂರು ಗ್ರಾಮ ಪಂಚಾಯತ್ ಖಾಲಿ ಹುದ್ದೆಗಳ ಅಧಿಸೂಚನೆ
ಹುದ್ದೆಗಳ ಸಂಖ್ಯೆ: 19
ಉದ್ಯೋಗ ಸ್ಥಳ: ಮೈಸೂರು - ಕರ್ನಾಟಕ
ಪೋಸ್ಟ್ ಹೆಸರು: ಗ್ರಂಥಾಲಯದ ಮೇಲ್ವಿಚಾರಕ
ಅರ್ಹತೆ
ಮೈಸೂರು ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಪಿಯುಸಿ, ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣೀಕರಣ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: BBMP: ಕನ್ನಡ ಉಪನ್ಯಾಸಕರು ಬೇಕಾಗಿದ್ದಾರೆ.. ಸಂಬಳ 43-83 ಸಾವಿರ!
ವಯೋಮಿತಿ
ಮೈಸೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಕ್ಟೋಬರ್ 30, 2024ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅದಕ್ಕೂ ಮುನ್ನ ಉದ್ಯೋಗಕ್ಕೆ ತಕ್ಕ ಅರ್ಹತೆ ಇದೆಯಾ ಎಂದು ಪರಿಶೀಲಿಸುವುದು ಒಳಿತು. ಅರ್ಜಿಯನ್ನು ಸಲ್ಲಿಸುವುದಕ್ಕೂ ಮುನ್ನ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯ ಮೂಲಕ ಶೈಕ್ಷಣಿಕ ಅರ್ಹತೆ ಪಟ್ಟಿ, ರೆಸ್ಯೂಮ್ ಇತ್ಯಾದಿ ದಾಖಲೆಗಳನ್ನು ಇಟ್ಟುಕೊಂಡು ಅಪ್ಲೈ ಮಾಡಿ.
ಇದನ್ನೂ ಓದಿ: ಮೆಗಾ ಹರಾಜಿಗೆ ಮುನ್ನವೇ ಆರ್ಸಿಬಿಗೆ ಭರ್ಜರಿ ಗುಡ್ನ್ಯೂಸ್; ಬೆಂಗಳೂರಿಗೆ ಬಂತು ಥಂಡರ್ ಸ್ಟಾರ್ಮ್!
ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿರಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು, ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿರಿ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಅಕ್ಟೋಬರ್-2024
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: mysore.nic.in
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ