‘ಹಾಸನದಲ್ಲಿ ಹೆದರಿಸಿ, ಬೆದರಿಸಿ ಚಿತ್ರೀಕರಣ’- ಅಶ್ಲೀಲ ವಿಡಿಯೋಗಳ ಸತ್ಯ ಬಿಚ್ಚಿಟ್ಟ ಡಾ.ನಾಗಲಕ್ಷ್ಮಿ ಚೌಧರಿ

author-image
admin
Updated On
‘ಹಾಸನದಲ್ಲಿ ಹೆದರಿಸಿ, ಬೆದರಿಸಿ ಚಿತ್ರೀಕರಣ’- ಅಶ್ಲೀಲ ವಿಡಿಯೋಗಳ ಸತ್ಯ ಬಿಚ್ಚಿಟ್ಟ ಡಾ.ನಾಗಲಕ್ಷ್ಮಿ ಚೌಧರಿ
Advertisment
  • ಹೆಣ್ಣು ಮಕ್ಕಳ ಚಿತ್ರೀಕರಣ ಮಾಡಿಕೊಂಡಿರುವುದು ದೊಡ್ಡ ಅಪರಾಧ
  • ವಿಡಿಯೋಗಳನ್ನು ಮತ್ತೊಬ್ಬರು ಎಲ್ಲಾ ಕಡೆ ಹಂಚಿಕೆ ಮಾಡಿರೋದು ತಪ್ಪು
  • ಹಾಸನದಲ್ಲಿ ಹೆಣ್ಣು ಮಕ್ಕಳಿಗೆ ನಂಬಿಸಿ, ವಂಚಿಸಿ, ಹೆದರಿಸಿದ್ದಾರೆ ಎಂಬ ಆರೋಪ

ಬೆಂಗಳೂರು: ಹಾಸನದಲ್ಲಿ ಬೆಳಕಿಗೆ ಬಂದ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಸಾವಿರಾರು ಹೆಣ್ಣು ಮಕ್ಕಳ ವಿಡಿಯೋ ಚಿತ್ರೀಕರಿಸಲಾಗಿದ್ದು ದೊಡ್ಡ ಅಪರಾಧ. ವಿಡಿಯೋ ಚಿತ್ರೀಕರಿಸಿದ್ದು ಹಾಗೂ ವಿಡಿಯೋ ಹಂಚಿಕೆ ಮಾಡಿದ ಇಬ್ಬರಿಗೂ ಶಿಕ್ಷೆಯಾಗಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಒತ್ತಾಯಿಸಿದ್ದಾರೆ.

ನ್ಯೂಸ್‌ ಫಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ನಾಗಲಕ್ಷ್ಮಿ ಚೌಧರಿ ಅವರು ಈ ಪ್ರಕರಣದ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡರು. ಹಾಸನದ ಅಶ್ಲೀಲ ವಿಡಿಯೋಗೆ ಸಂಬಂಧಪಟ್ಟಂತೆ ಹಲವಾರು ಮಹಿಳಾ ಸಂಘಟನೆ, ಹೋರಾಟಗಾರರು ಮಹಿಳಾ ಆಯೋಗಕ್ಕೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಇದರ ಸೂಕ್ಷ್ಮತೆಯನ್ನು ಅರಿತು ತನಿಖೆ ನಡೆಸುವಂತೆ ಕೂಡಲೇ ಒತ್ತಾಯಿಸಲಾಗಿದೆ ಎಂದಿದ್ದಾರೆ.

publive-image

ಡಾ.ನಾಗಲಕ್ಷ್ಮಿ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾಸನ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಒತ್ತಾಯಿಸಿದ್ದಾರೆ. ಹೆಣ್ಣು ಮಕ್ಕಳ ಚಿತ್ರೀಕರಣ ಮಾಡಿಕೊಂಡಿರುವುದು ದೊಡ್ಡ ಅಪರಾಧ. ಚಿತ್ರೀಕರಣ ಮಾಡಿದ ವಿಡಿಯೋಗಳನ್ನು ಮತ್ತೊಬ್ಬರು ಎಲ್ಲಾ ಕಡೆ ಹಂಚಿಕೆ ಮಾಡಿದ್ದಾರೆ. ಇಬ್ಬರಿಗೂ ಶಿಕ್ಷೆಯಾಗಬೇಕು ಎಂದು ನಾನು ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:2,876 ಸಂತ್ರಸ್ತೆಯರು.. ಹಾಸನ ಅಶ್ಲೀಲ ವಿಡಿಯೋ ಕೇಸ್‌ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಹಿಳಾ ಆಯೋಗ 

ಇದು ಸಾವಿರಾರು ಹೆಣ್ಣು ಮಕ್ಕಳು ಜೀವನ ಮತ್ತು ಬದುಕಿನ ಪ್ರಶ್ನೆ ಆಗಿದೆ. ಇದಕ್ಕೆ ನ್ಯಾಯ ಸಿಗಬೇಕು. ಈ ಪ್ರಕರಣ ಬೇರೆಯವರಿಗೆ ಮಾದರಿಯಾಗಬೇಕು. ಈ ಕೃತ್ಯಕ್ಕೆ ಶೂನ್ಯ ಸಹಿಷ್ಣತೆ ಇದೆ. ಯಾರಿಂದಲೂ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಅಪರಾಧಕ್ಕೆ ಶಿಕ್ಷೆ ಆಗಲೇಬೇಕು. ಒಂದು ಅಂದಾಜಿನ ಪ್ರಕಾರ ಸುಮಾರು 2,876 ಮಹಿಳೆಯರು ಈ ಪ್ರಕರಣದಲ್ಲಿ ಇದ್ದಾರೆ ಎಂದು ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ಸದ್ಯ ರಾಜ್ಯ ಮಹಿಳಾ ಆಯೋಗಕ್ಕೆ ಹಾಸನದ ಸಂತ್ರಸ್ತೆ ಒಬ್ಬರು ದೂರು ನೀಡಿದ್ದಾರೆ. ಆ ದೂರನ್ನು ನಿನ್ನೆಯೇ ಹಾಸನ ಎಸ್‌ಪಿಗೆ ಕಳುಹಿಸಿದ್ದೇನೆ. ಆ ಹೆಣ್ಣು ಮಗಳಿಗೆ ರಕ್ಷಣೆ ನೀಡುವಂತೆ ಮತ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದ್ದೇವೆ. ಹಾಸನದಲ್ಲಿ ಅಧಿಕಾರ, ಸ್ಥಾನವನ್ನು ದುರುಪಯೋಗಪಡಿಸಿಕೊಂಡು ನಂಬಿಸಿ, ವಂಚಿಸಿ, ಹೆದರಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಜೀವ ಬೆದರಿಕೆ ಕೂಡ ಇದೆ. ನಾನು ಸಂತ್ರಸ್ತೆಯರಿಗೆ ಹೆದರಬೇಡಿ ಎಂದು ಹೇಳುತ್ತೇನೆ ಎಂದು ಡಾ.ನಾಗಲಕ್ಷ್ಮಿ ಚೌಧರಿ ಅವರು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment