BREAKING: ಕೊನೆಗೂ ಕಾಂಗ್ರೆಸ್‌ ಮೊದಲ ವಿಕೆಟ್ ಪತನ; ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ?

author-image
admin
Updated On
ವಾಲ್ಮೀಕಿ ಹಗರಣದ ತನಿಖೆಗೆ ಬಿಗ್ ಟ್ವಿಸ್ಟ್.. ಸಿಎಂ ಸಿದ್ದರಾಮಯ್ಯ ಮೇನ್​ ಟಾರ್ಗೆಟ್​; FIR ದಾಖಲು
Advertisment
  • ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
  • ಸ್ವಯಂಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ
  • ವಿರೋಧ ಪಕ್ಷಗಳ ಆಗ್ರಹಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟಿ, ಕೋಟಿ ಹಗರಣದಲ್ಲಿ ಇಂದು ಸಚಿವ ನಾಗೇಂದ್ರ ಅವರ ತಲೆದಂಡ ಆಗುವ ಸಾಧ್ಯತೆ ಇದೆ. ವಿರೋಧ ಪಕ್ಷ ಬಿಜೆಪಿ ನಾಯಕರು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಳಿಕ ಖುದ್ದು ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


">June 6, 2024

ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಿರುವ ವಿಚಾರಕ್ಕೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಪಕ್ಷ ಹಾಗೂ ಸರ್ಕಾರದ ಘನತೆ ಉಳಿಸಲು ನಾಗೇಂದ್ರ ಅವರೇ ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:ನಾಳೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು? 

ಕಾಂಗ್ರೆಸ್‌ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು. ಹೀಗಾಗಿ ಸ್ವಯಂಪ್ರೇರಿತರಾಗಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇರಲಿಲ್ಲ ಎಂದು ಡಿಕೆಶಿ ಹೇಳಿದರು.

ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು. ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ‌ ಎಂದ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಈ ಹೇಳಿಕೆ ಬಳಿಕ ಸಚಿವ ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿತ್ತು. ಆದರೆ ನಾಗೇಂದ್ರ ಅವರು ತಾನು ಇನ್ನೂ ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿಕೆ ನೀಡಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment