Advertisment

ಟೆಸ್ಟ್​ನಲ್ಲಿ ಸೋಲಿನ ಮೇಲೆ ಸೋಲು.. ನಾಯಕತ್ವ ತೊರೆಯಲು ಮುಂದಾದ ಸ್ಟಾರ್..!

author-image
Ganesh
Updated On
ಟೆಸ್ಟ್​ನಲ್ಲಿ ಸೋಲಿನ ಮೇಲೆ ಸೋಲು.. ನಾಯಕತ್ವ ತೊರೆಯಲು ಮುಂದಾದ ಸ್ಟಾರ್..!
Advertisment
  • ಸತತ ಸೋಲು ಹಿನ್ನೆಲೆಯಲ್ಲಿ ಕ್ಯಾಪ್ಟನ್ಸಿಗೆ ಗುಡ್​ಬೈ
  • ಟೆಸ್ಟ್​ ಕ್ರಿಕೆಟ್​ನಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ
  • ಕ್ಯಾಪ್ಟನ್ಸಿಗೆ ಗುಡ್​ಬೈ ಹೇಳಿ ಬ್ಯಾಟಿಂಗ್​​ ಮೇಲೆ ಗಮನ ಹರಿಸಲು ಪ್ಲಾನ್

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತ ಪಾಕಿಸ್ತಾನ 3 ಪಂದ್ಯಗಳ ಸರಣಿಯಲ್ಲಿ 2-1 ಅಂತರದಲ್ಲಿ ಗೆದ್ದುಕೊಂಡಿದೆ. ಮತ್ತೊಂದೆಡೆ ಬಾಂಗ್ಲಾದೇಶವು ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಸೋಲನ್ನು ಎದುರಿಸಿದೆ. ಇತ್ತ ನ್ಯೂಜಿಲೆಂಡ್ ವಿರುದ್ಧ ಭಾರತ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋಲನ್ನು ಕಂಡಿದೆ.

Advertisment

ಢಾಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0 ರಲ್ಲಿ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯವು ಅಕ್ಟೋಬರ್ 29 ರಂದು ನಡೆಯಲಿದೆ. ಈ ಪಂದ್ಯಕ್ಕೂ ಮುನ್ನವೇ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ:BBK11: ಈ ವಾರ ಇರಲಿದ್ಯಾ ಬಿಗ್​ ಟ್ವಿಸ್ಟ್; ಬಿಗ್​ಬಾಸ್​ ಮನೆಯಿಂದ ಆಚೆ ಬರೋ ಸ್ಪರ್ಧಿ ಯಾರು?

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ನಜ್ಮುಲ್ ಹುಸೇನ್ ನಾಯಕತ್ವವನ್ನು ತೊರೆಯುವ ಬಯಕೆ ವ್ಯಕ್ತಪಡಿಸಿದ್ದಾರೆ. ನಜ್ಮುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮೂರೂ ಫಾರ್ಮ್ಯಾಟ್​​ಗೂ ನಾಯಕರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ನಂತರ ನಾಯಕತ್ವದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಬಾಂಗ್ಲಾದೇಶ ಕ್ರಿಕೆಟ್ ತಂಡ ಭಾರತಕ್ಕೆ ಪ್ರವಾಸ ಬೆಳೆಸಿತ್ತು. ಈ ವೇಳೆಯೂ ಹೀನಾಯವಾಗಿ ಸೋಲನ್ನು ಕಂಡಿತ್ತು.

Advertisment

ಢಾಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಸೋತ ನಂತರ ಈ ನಿರ್ಧಾರಕ್ಕೆ ಹುಸೇನ್ ಬಂದಿದ್ದಾರೆ. ನಾಯಕತ್ವದಿಂದ ಕೆಳಗಿಳಿಯಲು ಬಯಸುವುದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿಗೆ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಬಿಸಿಬಿ ಅಧ್ಯಕ್ಷ ದೇಶದಲ್ಲಿ ಇಲ್ಲದ ಕಾರಣ ಆ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ನಾಯಕ ಬ್ಯಾಟಿಂಗ್‌ನತ್ತ ಗಮನಹರಿಸುವ ನಿಟ್ಟಿನಲ್ಲಿ ಕ್ಯಾಪ್ಟನ್ಸಿ ತೊರೆಯುವ ಮನಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ:ಔಟ್ ಆಗಿದ್ಕೆ ಕೋಪ.. ನೀರಿನ ಬಾಕ್ಸ್​ಗೆ ಬ್ಯಾಟ್​​ನಿಂದ ಬಡಿದ ಕೊಹ್ಲಿ -ವಿಡಿಯೋ

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment
Advertisment
Advertisment
Advertisment