newsfirstkannada.com

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ -ಗೊಂದಲಗಳಿಗೆ ಕಟೀಲು ಸ್ಪಷ್ಟನೆ

Share :

24-06-2023

    ರಾಜೀನಾಮೆ ಗೊಂದಲ ಬೆನ್ನಲ್ಲೇ ಕಟೀಲು ಮಾಧ್ಯಮ ಪ್ರಕಟಣೆ

    ಕಳೆದ ವಿಧಾನಸಭೆ ಚುನಾವಣೆಯಲ್ಲಿ BJPಗೆ ಸೋಲು

    ಕಟೀಲು ರಾಜೀನಾಮೆ ನೀಡುವಂತೆ ಕೆಲವರಿಂದ ಒತ್ತಾಯ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ -ಗೊಂದಲಗಳಿಗೆ ಕಟೀಲು ಸ್ಪಷ್ಟನೆ

https://newsfirstlive.com/wp-content/uploads/2023/06/KATEEL-1.jpg

Load More