ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ.. ಬೆಂಗಳೂರು ಪ್ರಯಾಣಿಕರಿಗೆ ಮಹತ್ವದ ಸುದ್ದಿ!

author-image
admin
Updated On
ಪ್ರಯಾಣಿಕರಿಗೆ ಗುಡ್​ನ್ಯೂಸ್​ ಕೊಟ್ಟ ನಮ್ಮ ಮೆಟ್ರೋ.. ನೀವು ಓದಲೇಬೇಕಾದ ಸ್ಟೋರಿ!
Advertisment
  • ಜನವರಿ 19ರಂದು ಈ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
  • ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಹೋಗುವ ಪ್ರಯಾಣಿಕರ ಗಮನಕ್ಕೆ
  • ಭಾನುವಾರ ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ BMRCL ಮಹತ್ವದ ಪ್ರಕಟಣೆ ನೀಡಿದೆ. ಇದೇ ಭಾನುವಾರ ಅಂದ್ರೆ ಜನವರಿ 19ರಂದು ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಗಲಿದ್ದು ವಿಷಾದಿಸಲಾಗಿದೆ.

ಮೆಟ್ರೋ ಪ್ರಯಾಣಿಕರ ಗಮನಕ್ಕೆ
19. 01. 2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ, ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.  ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ.
ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಬರುವ, ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್‌ ಫೀಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ನಿಗದಿತ ವೇಳಾಪಟ್ಟಿಯಂತೆ ರೈಲು ಸೇವೆಗಳು ಎಂದಿನಂತೆ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತವೆ.

ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ, ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆ ಭಾಗಶಃ ಸ್ಥಗಿತ ಆಗಲಿದೆ. ಹಸಿರು ಮಾರ್ಗದ ರೈಲು ಸಮಯಗಳಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಮತ್ತು ಎಂದಿನಂತೆ ಮೆಟ್ರೋ ರೈಲುಗಳ ಸೇವೆ ಇರಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲಿನ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದ್ದು, ಸಾರ್ವಜನಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

ಇದನ್ನೂ ಓದಿ: ಸೋಮವಾರದಿಂದ ನಮ್ಮ ಮೆಟ್ರೋ ಸಮಯದಲ್ಲಿ ಬದಲಾವಣೆ; ಪ್ರಯಾಣಿಕರು ಓದಲೇಬೇಕಾದ ಸುದ್ದಿ! 

ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ ನೇರಳೆ ಮಾರ್ಗದಲ್ಲಿನ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಡುವೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಮಾತ್ರ ಲಭ್ಯವಿರುವುದಿಲ್ಲ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ, ಮೆಟ್ರೋ ನಿಲ್ದಾಣಗಳ ನಡುವೆ ವಾಣಿಜ್ಯ ಸೇವೆ ಭಾಗಶಃ ಸ್ಥಗಿತ ಆಗಲಿದೆ. ಇತರ ವಿಭಾಗಗಳಲ್ಲಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment