newsfirstkannada.com

Share :

Published June 3, 2023 at 1:06pm

    ಒಡಿಶಾದ ಬಾಲಸೋರ್ ಜಿಲ್ಲೆಯ ರೈಲು ಭೀಕರ ದುರಂತ..

    ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ

    ಸುಮಾರು 900ಕ್ಕೂ ಅಧಿಕ ಮಂದಿ ತೀವ್ರ ಗಾಯ

ಭುವನೇಶ್ವರ್​​: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ನಡೆದ ಎಕ್ಸ್‌ಪ್ರೆಸ್ ರೈಲು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದುವರೆಗೂ 280ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ಈ ಅವಘಡದಲ್ಲಿ ಸುಮಾರು 900ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಹಲವರಿಗಾಗಿ ರಕ್ಷಣಾ ಕಾರ್ಯಾಚಾರಣೆ ಮುಂದುವರಿದೆ. ಈ ದುರ್ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಪ್ರಧಾನಿ ಮೋದಿ, ಈ ದುರಂತಕ್ಕೆ ಕಾರಣರಾದ ಯಾರನ್ನು ಸುಮ್ಮನೆ ಬಿಡುವುದಿಲ್ಲ. 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನೋವನ್ನು ವ್ಯಕ್ತಪಡಿಸಲು ನನ್ನ ಬಳಿ ಪದಗಳೇ ಇಲ್ಲ. ಈ ದುರಂತದಿಂದ ಪಾಠ ಕಲಿತಿದ್ದೇವೆ, ವ್ಯವಸ್ಥೆಯನ್ನು ಸುಧಾರಿಸುತ್ತೇವೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅದಕ್ಕಿಂತಲೂ ಹೆಚ್ಚಾಗಿ ಮೃತ ಕುಟುಂಬಗಳ ಜತೆ ನಾವಿದ್ದೇವೆ. ರೈಲು ದುರಂತದಿಂದ ಜನರನ್ನು ರಕ್ಷಿಸಲು ಶ್ರಮಿಸಿದ ಸ್ಥಳೀಯರಿಗೆ ಧನ್ಯವಾದಗಳು. ಈ ಕೇಸ್​​ ತನಿಖೆಗಾಗಿ ಸಮಿತಿಯನ್ನು ರಚಿಸಿದ್ದೇನೆ ಎಂದು ಹೇಳಿದರು ಪ್ರಧಾನಿ ಮೋದಿ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More