/newsfirstlive-kannada/media/post_attachments/wp-content/uploads/2023/10/Rakshit-Shetty.jpg)
ನವದೆಹಲಿ: ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದರು. ಕನ್ನಡದ ಚಾರ್ಲಿ 777 ಸಿನಿಮಾಗಾಗಿ ನಟ ರಕ್ಷಿತ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಯ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಪ್ರಶಸ್ತಿ ಪ್ರದಾನ ಮಾಡಿ ರಕ್ಷಿತ್ ಶೆಟ್ಟಿ ಅವರನ್ನು ಗೌರವಿಸಿದರು.
ಇನ್ನು, ಕನ್ನಡ ಸೇರಿ ಹಲವು ಭಾಷೆಗಳಲ್ಲಿ 777 ಚಾರ್ಲಿ ಸಿನಿಮಾ ರಿಲೀಸ್ ಆಗಿತ್ತು. ಈ ಸಿನಿಮಾಗೆ ಎಲ್ಲಾ ಭಾಷೆಗಳಲ್ಲೂ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಪ್ರಾದೇಶಿಕ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಲಭಿಸಿದೆ.
ಕಿರಣ್ ರಾಜ್ ನಿರ್ದೇಶನದ ಈ ಸಿನಿಮಾವನ್ನು ಸ್ವತಃ ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದರು. ಚಾರ್ಲಿ 777 ಹೊರತುಪಡಿಸಿ ಫೀಚರ್ ಸಿನಿಮಾ ವಿಭಾಗದಲ್ಲಿ ಯಾವ ಕನ್ನಡ ಸಿನಿಮಾಗೂ ಪ್ರಶಸ್ತಿಗಳು ಬಂದಿಲ್ಲ. ಸದ್ಯ ರಕ್ಷಿತ್ ಶೆಟ್ಟಿ ಈ ಸಾಧನೆ ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಹೆಸರು ತಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ