Advertisment

BREAKING; ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್​ಗೆ ಬೆಂಕಿ.. 20 ಪ್ರಯಾಣಿಕರು ಸಜೀವ ದಹನ

ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ.

author-image
Bhimappa
AP_BUS
Advertisment

ಅಮರಾವತಿ: ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

Advertisment

ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್​​ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:500ಕ್ಕೂ ಅಧಿಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ.. ಈ ಕೋರ್ಸ್ ಮಾಡಿದ್ರೆ ನಿಮಗೂ ಚಾನ್ಸ್​

AP_BUS_1

ಬಸ್​ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ‌ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್​ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

firecracker Bus
Advertisment
Advertisment
Advertisment