/newsfirstlive-kannada/media/media_files/2025/10/23/kitturu-rani-chennamma-2025-10-23-12-29-35.jpg)
ದೆಹಲಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ 201 ಜಯಂತೋತ್ಸವ ಆಚರಣೆ
ಇಂದು ವೀರ ರಾಣಿ ಕಿತ್ತೂರ ರಾಣಿ ಚೆನ್ನಮ್ಮ ಅವರ 201ನೇ ಜಯಂತ್ಸೋತ್ಸವ. ಈ ಹಿನ್ನಲೆಯಲ್ಲಿ ಕರ್ನಾಟಕದಿಂದ ಹಿಡಿದು ದೂರದ ದೆಹಲಿಯವರೆಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಆಚರಿಸಲಾಗುತ್ತಿದೆ. ದೆಹಲಿಯ ಪಾರ್ಲಿಮೆಂಟ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಕೇಂದ್ರದ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಲಾಗಿದೆ. ಸಂಸತ್ ಆವರಣದಲ್ಲಿರುವ ರಾಣಿ ಚೆನ್ನಮ್ಮ ಪ್ರತಿಮೆಗೆ ರಾಜಕೀಯ ಧುರೀಣರು ಮಾಲಾರ್ಪಣೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಜಗದೀಶ್ ಶೆಟ್ಟರ್, ರಾಜ್ಯಸಭೆ ಸದಸ್ಯೆ ಡಾ.ಸುಧಾ ಮೂರ್ತಿ , ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಜಯಮೃತ್ಯುಜಯ ಸ್ವಾಮೀಜಿ ಸೇರಿ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ.
/filters:format(webp)/newsfirstlive-kannada/media/media_files/2025/10/23/kitturu-rani-chennamma02-2025-10-23-12-33-07.jpg)
ಚೆನ್ನಮ್ಮ ಸಮಾಧಿಯನ್ನು ಅಭಿವೃದ್ಧಿಪಡಿಸಿ, ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು . ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೆರವು ಕೊಡಬೇಕು . ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲುಗಳ ಸಮರ್ಪಕ ನಿರ್ವಹಣೆ ಮಾಡಬೇಕಿದೆ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಚೆನ್ನಮ್ಮನ ಜೀವನ ಮತ್ತು ಯಶೋಗಾಥೆಯನ್ನು ಎಲ್ಲ ಭಾಷೆಯಲ್ಲಿ ಪುಸ್ತಕ ಹೊರ ತರಬೇಕಿದೆ . ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ . ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದರು.
ಹರಿಹರದ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಇದೇ ಆಗ್ರಹವನ್ನು ಮಾಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಆಗ್ರಹಿಸಿದ್ದಾರೆ.
/filters:format(webp)/newsfirstlive-kannada/media/media_files/2025/10/21/kitturu-rani-chennamma-statue-2025-10-21-13-10-33.jpg)
ಪಾರ್ಲಿಮೆಂಟ್ ಆವರಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us