/newsfirstlive-kannada/media/media_files/2025/08/08/cec-eci-333-2025-08-08-17-46-06.jpg)
12 ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಘೋಷಣೆ
ದೇಶದಲ್ಲಿ ಬಿಹಾರದಲ್ಲಿ ಯಶಸ್ವಿಯಾಗಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಸಿದ ಕೇಂದ್ರ ಚುನಾವಣಾ ಆಯೋಗವು ಈಗ ದೇಶದ 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವುದಾಗಿ ಇಂದು ಘೋಷಿಸಿದೆ. ಬಹುತೇಕ 2026 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲಿದೆ.
ಇನ್ನೂ ಯಾವ್ಯಾವ ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂಬ ಪಟ್ಟಿ ಇಲ್ಲಿದೆ.
1- ಅಂಡಮಾನ್ ಮತ್ತು ನಿಕೋಬಾರ್ ದ್ವೀಪ
2- ಛತ್ತೀಸ್ ಘಡ
3- ಗೋವಾ
4- ಗುಜರಾತ್
5- ಕೇರಳ
6-ಲಕ್ಷದ್ವೀಪ
7-ಮಧ್ಯಪ್ರದೇಶ
8-ಪುದುಚೇರಿ
9-ರಾಜಸ್ಥಾನ
10-ತಮಿಳುನಾಡು
11-ಉತ್ತರ ಪ್ರದೇಶ
12-ಪಶ್ಚಿಮ ಬಂಗಾಳ
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ ಕುಮಾರ್ ದೇಶದಲ್ಲಿ 12 ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದಾರೆ. ನವಂಬರ್ 4 ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಆರಂಭವಾಗಲಿದ್ದು, 51 ಕೋಟಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತೆ.
#SIR 12 States & UTs#ECI#SIRPhase2pic.twitter.com/JA2CnyWulz
— Election Commission of India (@ECISVEEP) October 27, 2025
2ನೇ ಹಂತದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುವ ಈ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯನ್ನು ಇಂದು ರಾತ್ರಿಯೇ ಜಫ್ತಿ ಮಾಡಿದೆ. 2002-04ರ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿತ್ತು. 21 ವರ್ಷದ ಬಳಿಕ ಈಗ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ.
1951 ರಿಂದ 2004ರ ನಡುವೆ 8 ಭಾರಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಇಸಿ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ಈ ಭಾರಿಯ ಮತದಾರರ ಪಟ್ಟಿ ಪರಿಷ್ಕರಣೆಯೂ ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆಗಿಂತ ಭಿನ್ನವಾಗಿರುತ್ತೆ ಎಂದು ಸಿಇಸಿ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us