/newsfirstlive-kannada/media/media_files/2026/01/28/ajit-pawar-2-2026-01-28-09-44-48.jpg)
ಬಾರಾಮತಿ:ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿರುವ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾಗಿದೆ.
ಹಲವರಿಗೆ ಗಾಯ
ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆ ಮತ್ತು ಗಾಯಾಳುಗಳ ನಿಖರ ಸಂಖ್ಯೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: Breaking News: ಮಹಾರಾಷ್ಟ್ರ DCM ಅಜಿತ್ ಪವರ್ ಪ್ರಯಾಣಿಸ್ತಿದ್ದ ವಿಮಾನ ಪತನ; ಹೆಚ್ಚಿದ ಆತಂಕ
/filters:format(webp)/newsfirstlive-kannada/media/media_files/2026/01/28/ajit-pawar-2026-01-28-09-38-31.jpg)
ವಿಮಾನದಲ್ಲಿ ಅಜಿತ್ ಪವಾರ್ ಇದ್ದರೇ?
ಅಪಘಾತದ ಸಮಯದಲ್ಲಿ ಅಜಿತ್ ಪವಾರ್ ಅವರು ವಿಮಾನದ ಒಳಗೆ ಇದ್ದರೇ ಅಥವಾ ಇಲ್ಲವೇ ಎಂಬ ಬಗ್ಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಇಂದು ಬಾರಾಮತಿಯಲ್ಲಿ ನಡೆಯಬೇಕಿದ್ದ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಅವರು ವಿಮಾನದ ಮೂಲಕ ಅಲ್ಲಿಗೆ ತೆರಳಬೇಕಿತ್ತು ಎಂದು ಮೂಲಗಳು ತಿಳಿಸಿವೆ. ಅವರು ಈಗಾಗಲೇ ವಿಮಾನ ನಿಲ್ದಾಣ ತಲುಪಿದ್ದರೇ ಅಥವಾ ವಿಮಾನದಲ್ಲಿದ್ದರೇ ಎಂಬ ಬಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ಏನಿದು ಘಟನೆ?
ತಾಂತ್ರಿಕ ಕಾರಣಗಳಿಂದಾಗಿ ವಿಮಾನವನ್ನು ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಲಾಗಿದೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ವಿಮಾನ ಪತನಗೊಂಡಿದೆ ಎನ್ನಲಾಗಿದೆ. ಸ್ಥಳಕ್ಕೆ ಭದ್ರತಾ ಪಡೆಗಳು ಹಾಗೂ ಅಗ್ನಿಶಾಮಕ ದಳ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿವೆ. ಅಜಿತ್ ಪವಾರ್ ಅವರ ಕ್ಷೇಮ ಸಮಾಚಾರದ ಬಗ್ಗೆ ಅವರ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಆತಂಕ ಮನೆಮಾಡಿದೆ. ಈ ಕುರಿತು ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಸಂಸಾರ ಬಡಿದಾಟ.. ನಟಿ ಕಾವ್ಯಾಗೌಡ, ಪತಿಗೆ ಎದುರಾಗುತ್ತಾ ಸಂಕಷ್ಟ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us