ಮತ್ತೊಂದು ಬಸ್ ಘೋರ​ ದುರಂತ.. 36 ಪ್ರಯಾಣಿಕರಿದ್ದ ಬಸ್ ಬೆಂಕಿಗೆ ಆಹುತಿ..

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದು, ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ.

author-image
Ganesh Kerekuli
bus fire
Advertisment

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ದುರ್ಮರಣಕ್ಕೀಡಾಗಿದ್ದು, ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಬಸ್ಸಿನಲ್ಲಿದ್ದ 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಹಿನ್ನೆಲೆ..

ನೆಲ್ಲೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಗುರುವಾರ ನಸುಕಿನ ಜಾವ ಸುಮಾರು 1:30 ರ ಸುಮಾರಿಗೆ ನಂದ್ಯಾಲ ತಲುಪಿದಾಗ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಬಸ್ಸಿನ ಬಲಗಡೆಯ ಟೈರ್ ಇದ್ದಕ್ಕಿದ್ದಂತೆ ಸಿಡಿದಿದ್ದೇ ದುರಂತಕ್ಕೆ ಕಾರಣವಾಗಿದೆ. ಟೈರ್ ಸಿಡಿದ ವೇಗಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕವನ್ನು (Divider) ದಾಟಿ ಎದುರಿನಿಂದ ಬರುತ್ತಿದ್ದ ಮೋಟಾರ್ ಸೈಕಲ್‌ಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಉಗ್ರಂ ಮಂಜುಗೆ ಮದುವೆ ಸಂಭ್ರಮ.. ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್‌..!

bus fire (3)

ಜವರಾಯನ ಅಟ್ಟಹಾಸ

ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಲಾರಿ ಎರಡರಲ್ಲೂ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಬಸ್ ಚಾಲಕ, ಲಾರಿ ಚಾಲಕ ಮತ್ತು ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ದೇವದೂತರಂತೆ ಬಂದ ಸ್ಥಳೀಯರು

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಒಳಗಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ನಿವಾಸಿಗಳು, ಬಸ್ ಕ್ಲೀನರ್ ಮತ್ತು ಕಂಡಕ್ಟರ್ ಬಸ್ಸಿನ ಕಿಟಕಿ ಗಾಜುಗಳನ್ನು ಒಡೆದು ಒಳಗಿದ್ದ ಪ್ರಯಾಣಿಕರನ್ನು ಹೊರಕ್ಕೆ ತರುವಲ್ಲಿ ಯಶಸ್ವಿಯಾದರು. ಈ ಸಾಹಸಮಯ ರಕ್ಷಣಾ ಕಾರ್ಯಾಚರಣೆಯಿಂದಾಗಿ ಬಸ್ಸಿನಲ್ಲಿದ್ದ ಎಲ್ಲಾ 36 ಪ್ರಯಾಣಿಕರು ಬದುಕುಳಿದಿದ್ದಾರೆ. ಗಾಯಗೊಂಡ ನಾಲ್ವರು ಪ್ರಯಾಣಿಕರನ್ನು ನಂದ್ಯಾಲ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಯಶಸ್ವಿಯಾಗಿ ಸಂಪನ್ನಗೊಂಡ ಕ-ರೈಡ್‌ನ ನಾಗರಿಕ–ಹಿತಾಸಕ್ತಿದಾರರ ಸಂಪರ್ಕ ಕಾರ್ಯಕ್ರಮ

bus fire (2)

ಸಂಚಾರ ವ್ಯತ್ಯಯ

ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸಿದರು. ಅಷ್ಟರಲ್ಲೇ ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವಾರು ಗಂಟೆಗಳ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

bus fire (1)

ಮತ್ತೆ ಮರುಕಳಿಸಿದ ಆತಂಕ

2025ರ ಅಕ್ಟೋಬರ್‌ನಲ್ಲಿ ನೆರೆಯ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದ್ದ ಬಸ್ ಬೆಂಕಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರು. ಆ ಘಟನೆಯ ಮಾಸುವ ಮುನ್ನವೇ ನಡೆದ ಈ ಅಪಘಾತವು ಖಾಸಗಿ ಬಸ್‌ಗಳ ಸುರಕ್ಷತೆ, ರಾತ್ರಿ ಪ್ರಯಾಣದ ಅಪಾಯ ಮತ್ತು ವಾಹನಗಳ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಆತಂಕ ಮೂಡಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ:ಕೊನೆಗೂ ಸಿಎಂ ಕಚೇರಿಗೆ ಬಂತು ಸಂದೇಶ.. ಸದನಕ್ಕೆ ಬರ್ತಾರೆ ರಾಜ್ಯಪಾಲರು.. ಭಾಷಣ ಓದುತ್ತಾರಾ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Accident NEWS Bus
Advertisment