/newsfirstlive-kannada/media/media_files/2025/10/09/delhi-police-hq-2025-10-09-18-23-41.jpg)
ದೆಹಲಿ ಪೊಲೀಸ್ ಇಲಾಖೆಯಲ್ಲಿ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ ಟೇಬಲ್ ಕಾರ್ಯನಿರ್ವಾಹಕ ಪುರುಷ ಮತ್ತು ಮಹಿಳಾ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಕಂಪ್ಯೂಟರ್ ಆಧಾರಿತ ಪರೀಕ್ಷೆಯು 2025 ರ ಡಿಸೆಂಬರ್ ಮತ್ತು 2026 ರ ಜನವರಿಯಲ್ಲಿ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸುವವರು ಅಂಗೀಕೃತ ಮಂಡಳಿಯಿಂದ ಹಿರಿಯ ಸೆಕೆಂಡರಿ ಪಿಯುಸಿಯಲ್ಲಿ ಉತ್ತೀರ್ಣವಾಗಿರಬೇಕು. ದೆಹಲಿ ಪೊಲೀಸ್ ಸೇವೆಯಲ್ಲಿ ನಿವೃತ್ತ ಅಥವಾ ಮೃತರಾಗಿರುವ ದೆಹಲಿ ಪೊಲೀಸ್ ಸಿಬ್ಬಂದಿ/ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಮತ್ತು ಬ್ಯಾಂಡ್ಸ್ಮೆನ್, ಬಗ್ಲರ್ಗಳು, ಮೌಂಟೆಡ್ ಕಾನ್ಸ್ ಟೇಬಲ್, ಚಾಲಕರು, ಡಿಸ್ಪ್ಯಾಚ್ ರೈಡರ್ಗಳು ಮತ್ತಿತರ ಪುತ್ರರು / ಪುತ್ರಿಯರಿಗೆ ಮಾತ್ರ 11 ನೇ ತರಗತಿ ಉತ್ತೀರ್ಣರಾದವರಿಗೆ ಸಡಿಲಿಕೆ ನೀಡಲಾಗಿದೆ. ಪುರುಷ ಅಭ್ಯರ್ಥಿಗಳು ಎಲ್ಎಂವಿ ಬೈಕ್ ಮತ್ತು ಕಾರು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ಕಂಪ್ಯೂಟರ್ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ದೆಹಲಿ ಪೊಲೀಸರು ದೈಹಿಕ ಮತ್ತು ಮಾಪನ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಒಟ್ಟು ಹುದ್ದೆಗಳು 7565, ಪುರುಷ-5069 ಮತ್ತು ಮಹಿಳೆಯರು-2496 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಅರ್ಜಿ ಶುಲ್ಕ 100 ರೂ ನಿಗಧಿಪಡಿಸಿದ್ದು, ಮಹಿಳಾ ಅಭ್ಯರ್ಥಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿಯನ್ನು 2025 ನೇ ಅಕ್ಟೋಬರ್ 21 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520, ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.
ಅಭ್ಯರ್ಥಿಗಳು ಎಸ್ಎಸ್ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್ಎಸ್ಸಿ ಕರ್ನಾಟಕ-ಕೇರಳ ಪ್ರದೇಶದ ಜಾಲತಾಣ www.ssckkr.kar.nic.in ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.