/newsfirstlive-kannada/media/media_files/2025/10/25/delhi_kitturu_rani_channamma-2025-10-25-09-10-59.jpg)
ನವದೆಹಲಿ: ವೀರರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ದ್ವಿಶತಮಾನೋತ್ಸವ ಸಮಾರಂಭದಲ್ಲಿ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಮಹಾಸ್ವಾಮಿ ಅವರ ದಿವ್ಯಸಾನಿದ್ಯದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು 200 ರೂಪಾಯಿಯ ಸ್ಮಾರಕ ನಾಣ್ಯ ಬಿಡುಗಡೆ ಮಾಡಿದರು.
ನವದೆಹಲಿಯ ಸಿರಿ ಪೋರ್ಟ್ ಸಭಾಂಗಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮನ ವಿಜಯೋತ್ಸವದ ದ್ವಿಶತಮಾನೋತ್ಸವ ಅಂಗವಾಗಿ ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಹಾಗೂ ದೆಹಲಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿ ಅವರ ದಿವ್ಯಸಾನಿದ್ಯದಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋಧ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು 200 ರೂಪಾಯಿಯ ಸ್ಮಾರಕ ನಾಣ್ಯವನ್ನು ಬಿಡುಗಡೆ ಮಾಡಿದರು.
/filters:format(webp)/newsfirstlive-kannada/media/media_files/2025/10/25/delhi_kitturu_rani_channamma_1-2025-10-25-09-11-14.jpg)
ಇದೇ ವೇಳೆ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯರಾದ ನಾರಾಯಣರಾವ್ ಬಾಂಢಗೆ ಮತ್ತು ದೆಹಲಿ ಕನ್ನಡ ಸಂಘದ ಅಧ್ಯಕ್ಷರಾದ ಸಿ.ಎಂ ನಾಗರಾಜ ಅವರು ಉಪಸ್ಥಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us