/newsfirstlive-kannada/media/media_files/2025/12/12/bus-accident-2025-12-12-09-55-00.jpg)
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು (ಎಎಸ್ಆರ್: Alluri Sitharama Raju) ಜಿಲ್ಲೆಯಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಯಾಣಿಕರಿದ್ದ ಖಾಸಗಿ ಬಸ್ ಚಿತ್ತೂರು-ಮರ್ದುಮಲ್ಲಿ ಘಾಟ್​​ನಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ದುರ್ಘಟನೆಯಲ್ಲಿ ಹತ್ತು ಪ್ರಯಾಣಿಕರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು. ಬಸ್ ತೆಲಂಗಾಣದ ಭದ್ರಾಚಲಂನಿಂದ ಅನ್ನಾವರಂಗೆ ಪ್ರಯಾಣಿಸುತ್ತಿತ್ತು ಎಂದು ವರದಿಯಾಗಿದೆ.
ಇದನ್ನೂ ಓದಿ:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳ ನಡೆಸಲು ಗ್ರೀನ್ ಸಿಗ್ನಲ್..!
ASR ಜಿಲ್ಲಾಧಿಕಾರಿ ದಿನೇಶ್ ಕುಮಾರ್ ಘಟನೆಯನ್ನು ದೃಢಪಡಿಸಿದ್ದಾರೆ. ಜಿಲ್ಲಾಡಳಿತವು ತ್ವರಿತ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ. ಗಾಯಾಳುಗಳನ್ನು ಭದ್ರಾಚಲಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಬಸ್ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಉನ್ನತ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತಲುಪಲು ಸೂಚಿಸಿದ್ದಾರೆ. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಪರಿಹಾರ ಮತ್ತು ವೈದ್ಯಕೀಯ ಸೇವೆಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: ಆಯ್ಕೆಗಾರರಿಗೆ ನೇರ ಸಂದೇಶ ಕೊಟ್ಟ ಜೈಸ್ವಾಲ್.. ದೊಡ್ಡ ಕನಸು ಏನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us