/newsfirstlive-kannada/media/media_files/2025/08/01/lpg-cylinder-price-2025-08-01-11-31-47.jpg)
ಬೆಂಗಳೂರು: ಫೆಬ್ರವರಿ ತಿಂಗಳ ಮೊದಲ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಿಗಳಿಗೆ ದೊಡ್ಡ ಹೊರೆಯಾಗಿದೆ.
50 ರೂಪಾಯಿ ಏರಿಕೆ
ಇಂದಿನಿಂದಲೇ (ಫೆಬ್ರವರಿ 1, 2026) ಅನ್ವಯವಾಗುವಂತೆ 19 ಕೆಜಿ ತೂಕದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಏರಿಕೆಯ ನಂತರ, ವಾಣಿಜ್ಯ ಸಿಲಿಂಡರ್ ಬೆಲೆ ಈಗ 1,814 ರೂಪಾಯಿ ತಲುಪಿದೆ. ವಾಣಿಜ್ಯ ಗ್ಯಾಸ್ ಬೆಲೆ ಏರಿಕೆಯಾಗಿರುವುದರಿಂದ ಹೋಟೆಲ್, ಕ್ಯಾಂಟೀನ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರಿಗೆ ನಿರ್ವಹಣಾ ವೆಚ್ಚ ಹೆಚ್ಚಾಗಲಿದೆ. ಇದರ ನೇರ ಪರಿಣಾಮ ಗ್ರಾಹಕರ ಮೇಲೆ ಬೀರುವ ಸಾಧ್ಯತೆಯಿದ್ದು, ಹೊರಗಿನ ತಿಂಡಿ-ತಿನಿಸುಗಳು ಹಾಗೂ ಊಟದ ದರದಲ್ಲಿ ಸ್ವಲ್ಪ ಮಟ್ಟಿನ ಏರಿಕೆಯಾಗುವ ಆತಂಕ ಎದುರಾಗಿದೆ.
ಗೃಹಿಣಿಯರಿಗೆ ನೆಮ್ಮದಿ
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 14.2 ಕೆಜಿ ತೂಕದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ದರ ಸ್ಥಿರವಾಗಿದ್ದು, ಇದು ಸಾಮಾನ್ಯ ಜನರಿಗೆ ಮತ್ತು ಗೃಹಿಣಿಯರಿಗೆ ಸಮಾಧಾನ ತಂದಿದೆ. ಸಾಮಾನ್ಯವಾಗಿ ಪ್ರತಿ ತಿಂಗಳ 1ನೇ ತಾರೀಖಿನಂದು ತೈಲ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಕಳೆದ ಕೆಲವು ತಿಂಗಳಿಂದ ಏರಿಳಿತ ಕಾಣುತ್ತಿದ್ದ ಕಮರ್ಷಿಯಲ್ ಗ್ಯಾಸ್ ದರ, ಈ ಬಾರಿ 50 ರೂ.ಗಳಷ್ಟು ಏರಿಕೆಯಾಗಿರುವುದು ಗಮನಾರ್ಹ.
ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಬಂಪರ್ ನ್ಯೂಸ್! ಚಿನ್ನದ ದರದಲ್ಲಿ ಭಾರೀ ಕುಸಿತ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us