BREAKING; ಉಪರಾಷ್ಟ್ರಪತಿ ಚುನಾವಣೆ.. NDA ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್​ಗೆ ಭರ್ಜರಿ ಗೆಲುವು

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರಿಗೆ ಗೆಲುವು ದೊರೆತ್ತಿದ್ದು 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. 452 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.

author-image
Bhimappa
CP_RADHAKRISHNAN
Advertisment

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರಿಗೆ ಗೆಲುವು ದೊರೆತ್ತಿದ್ದು 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. 452 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.  

ಸದ್ಯ ಉಪರಾಷ್ಟ್ರಪತಿ ಎಲೆಕ್ಷನ್​ನಲ್ಲಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರು ಗೆಲುವು ಪಡೆದ ಹಿನ್ನೆಲೆಯಲ್ಲಿ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ ಸೇರಿದಂತೆ ಬಿಜೆಪಿ ಹಾಗೂ ಎನ್​ಡಿಯ ಇತರೆ ಪಕ್ಷಗಳ ಸದಸ್ಯರು ನೂತನ ಉಪರಾಷ್ಟ್ರಪತಿಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಇತ್ತ ವಿರೋಧ ಪಕ್ಷಗಳ ಸದಸ್ಯರು ಕೂಡ ಕಂಗ್ರಾಟ್ಸ್ ಹೇಳುತ್ತಿದ್ದಾರೆ. 

ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಸಲಾಗಿತ್ತು. ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿದ್ದ ಸುದರ್ಶನ್ ರೆಡ್ಡಿ ಕೇವಲ 300 ಮತಗಳನ್ನು ಮಾತ್ರ ಪಡೆದುಕೊಂಡಿದ್ದರು. ಹೀಗಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ ರಾಧಕೃಷ್ಣನ್ ಅವರ ವಿರುದ್ಧ ಸುದರ್ಶನ್ ರೆಡ್ಡಿ ಅವರು ಸೋಲನುಭವಿಸಿದ್ದಾರೆ. 152 ಮತಗಳ ಅಂತರದಿಂದ ಸಿ.ಪಿ ರಾಧಕೃಷ್ಣನ್ ಜಯ ಸಾಧಿಸಿದ್ದಾರೆ. 

ಇದನ್ನೂ ಓದಿ:ಡಿಜಿಟಲ್ ಅರೆಸ್ಟ್​; 30 ಲಕ್ಷ ರೂಪಾಯಿ ಕಳೆದುಕೊಂಡ ಮಾಜಿ ಶಾಸಕ.. ಯಾರಿದು?

cp radhakrishnan (2)

16ನೇ ಉಪರಾಷ್ಟ್ರಪತಿಗಳಾಗಿದ್ದ ಜಗದೀಪ್ ಧನಕರ್ ಅವರು ಅನಾರೋಗ್ಯದ ಕಾರಣ ನೀಡಿ ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗಿತ್ತು. ಒಟ್ಟು 767 ಮತಗಳ ಪೈಕಿ ವಿಪಕ್ಷಗಳ 14 ಮತಗಳಿಂದ ಅಡ್ಡ ಮತದಾನ ಮಾಡಲಾಗಿದೆ. ಉಳಿದ 752 ಮತಗಳಲ್ಲಿ ಎನ್​​ಡಿಎಗೆ 452 ಮತಗಳು ಹಾಗೂ ಇಂಡಿಯಾ ಒಕ್ಕೂಟಕ್ಕೆ 300 ಮತಗಳು ಬಂದಿದ್ದವು. 

ಯಾರು ಈ ನೂತನ ಉಪರಾಷ್ಟ್ರಪತಿ ರಾಧಾಕೃಷ್ಣನ್?

1957ರಲ್ಲಿ ತಮಿಳುನಾಡಿನ ತಿರುಪ್ಪರ್‌ನಲ್ಲಿ ಜನಿಸಿದ ರಾಧಾಕೃಷ್ಣನ್ ಅವರು 2024ರ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಈ ಹಿಂದೆ 2023ರ ಫೆಬ್ರುವರಿಯಿಂದ 2024ರ ಜುಲೈವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಕೆಲಸ ಮಾಡಿದ್ದರು. ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ತೆಲಂಗಾಣದ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಹೊಣೆ ವಹಿಸಿಕೊಂಡಿದ್ದರು. 1998ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1999ರಲ್ಲಿ ಅದೇ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. 2004ರಿಂದ 2007ರ ವರೆಗೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. 2020ರಿಂದ 2022ರ ವರೆಗೆ ಬಿಜೆಪಿ ಕೇರಳ ಘಟಕದ ಉಸ್ತುವಾರಿಯಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Vice president election CP Radhakrishnan BJP
Advertisment