/newsfirstlive-kannada/media/media_files/2025/09/27/up-accident-2025-09-27-10-46-41.jpg)
ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಮಹೀಂದ್ರಾ ಥಾರ್ ಕಾರ್
ಗುರುಗ್ರಾಮ: ಹರಿಯಾಣದ ಗುರುಗ್ರಾಮದ ರಾಜೀವ್ ಚೌಕ್ ಬಳಿ ರಾಷ್ಟ್ರೀಯ ಹೆದ್ದಾರಿ ಎಗ್ಸಿಟ್ 9ರ ಬಳಿ ಬೆಳಗಿನ ಜಾವ 4.30 ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಐವರು ಜೀವ ಬಿಟ್ಟಿದ್ದಾರೆ.
ಮಹಿಂದ್ರಾ ಥಾರ್​ ಕಾರಿನಲ್ಲಿದ್ದ 6 ಜನರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ರಾಜೀವ್ ಚೌಕ್ ಬಳಿ ರಾಷ್ಟ್ರೀಯ ಹೆದ್ದಾರಿ ಎಗ್ಸಿಟ್ 9ರ ಬಳಿ ಬರುತ್ತಿದ್ದಂತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದರಿಂದ ಕಾರಿನಲ್ಲಿದ್ದ 6 ಜನರ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜೀವ್ ಚೌಕ್ ಕಡೆಗೆ ಹೆದ್ದಾರಿಯಿಂದ ನಿರ್ಗಮಿಸುತ್ತಿದ್ದಾಗ, ವೇಗವಾಗಿ ಬಂದ ಥಾರ್ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಥಾರ್​ನಲ್ಲಿದ ಪ್ರಯಾಣಿಕರು ಉತ್ತರ ಪ್ರದೇಶ ಮೂಲದವರಾಗಿದ್ದು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಜೀವ ಕಳೆದುಕೊಂಡಿದ್ದಾರೆ. ಒಬ್ಬ ಪ್ರಯಾಣಿಕರು ಮಾತ್ರ ಪವಾಡ ಎಂಬಂತೆ ಉಳಿದಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈಗಾಗಲೇ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.