/newsfirstlive-kannada/media/media_files/2025/11/11/delhi-insident-2025-11-11-11-04-08.jpg)
ದೆಹಲಿ ಕಾರು ಸ್ಫೋ* ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇಲ್ಲಿಯವರೆಗೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಪೊಲೀಸರು ಅಲರ್ಟ್ ಆಗಿದ್ದು, ರಾತ್ರಿಯಿಡೀ ದೆಹಲಿಯ ಪಹರ್‌ಗಂಜ್, ದರಿಯಾಗಂಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಹೋಟೆಲ್‌ಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಸದ್ಯ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಸಂಪೂರ್ಣ ತನಿಖೆಯನ್ನು NIA ಹೆಗಲಿಗೆ ವಹಿಸುವ ಸಾಧ್ಯತೆ ಇದೆ. ಪ್ರಸ್ತುತ UAPA ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಶೇಷ ತನಿಖಾ ಸಂಸ್ಥೆ, ದೆಹಲಿ ಪೋಲಿಸರು ಹಾಗೂ ಜಮ್ಮು ಕಾಶ್ಮೀರದ ಪೊಲೀಲಿಸರು ತನಿಖೆ ನಡೆಸುತ್ತಿದ್ದಾರೆ. ಈಗ ಪ್ರಕರಣದ ಸಂಪೂರ್ಣ ಜವಾಬ್ದಾರಿಯನ್ನು ಎನ್​ಐಎ ಹೆಗಲಿಗೆ ವಹಿಸಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ.
ನಿನ್ನೆಯ ಸ್ಫೋ* ಪ್ರಕರಣದಲ್ಲಿ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us