/newsfirstlive-kannada/media/media_files/2025/12/29/tatanagar-ernakulam-express-1-2025-12-29-07-44-40.jpg)
ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನಲ್ಲಿ (Tatanagar-Ernakulam express ) ಬೆಂಕಿ ಹೊತ್ತಿಕೊಂಡಿತು. ನಿನ್ನೆ ಮಧ್ಯರಾತ್ರಿ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಳಗಿನ ಜಾವ 1.30 ಕ್ಕೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಕಾನೂನು -ಸಿದ್ದರಾಮಯ್ಯ ಸರ್ಕಾರ ಮಹತ್ವದ ನಿರ್ಧಾರ
ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಲೋಕೋ ಪೈಲಟ್‌ಗಳು ಎಲಮಂಚಿಲಿ ಬಳಿಯ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೂಡಲೇ ಮಾಹಿತಿ ನೀಡಲಾಯಿತು. ರಕ್ಷಣಾ ಸಿಬ್ಬಂದಿ ಅಲ್ಲಿಗೆ ತಲುಪುವ ಹೊತ್ತಿಗೆ ಎರಡು ಬೋಗಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಇಡೀ ನಿಲ್ದಾಣವು ದಟ್ಟ ಹೊಗೆಯಿಂದ ಆವೃತವಾಗಿತ್ತು. ಸುತ್ತಮುತ್ತಲಿನ ಪ್ರದೇಶಗಳು ಭಯಾನಕವಾಗಿ ಕಾಣುತ್ತಿದ್ದವು. ಅಷ್ಟರಲ್ಲಿ ಅನಕಪಲ್ಲಿ, ಎಲಮಂಚಿಲಿ ಮತ್ತು ನಕ್ಕಪಲ್ಲಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದರು.
/filters:format(webp)/newsfirstlive-kannada/media/media_files/2025/12/29/tatanagar-ernakulam-express-2025-12-29-07-44-18.jpg)
ಬ್ರೇಕ್ ಹಾಕಿದಾಗ ಬೆಂಕಿ
ಲೋಕೋ ಪೈಲೆಟ್ ಬ್ರೇಕ್ ಹಾಕಿದಾಗ ಬಿ1 ಎಸಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿ1 ಬೋಗಿಯಲ್ಲಿದ್ದ ಒಬ್ಬ ವ್ಯಕ್ತಿ ಸಜೀವ ದಹನವಾಗಿದ್ದಾನೆ. ಮೃತರನ್ನು ವಿಶಾಖಪಟ್ಟಣದ ಚಂದ್ರಶೇಖರ್ ಸುಂದರ್ (70) ಎಂದು ಗುರುತಿಸಲಾಗಿದೆ. ಇತರ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆದರೂ ಎಲ್ಲಾ ಪ್ರಯಾಣಿಕರ ವಸ್ತುಗಳು ಸುಟ್ಟುಹೋಗಿವೆ. ಸುಮಾರು ಎರಡು ಡಜನ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ದುರ್ಘಟನೆ ಹಿನ್ನೆಲೆಯಲ್ಲಿ ವಿಶಾಖಪಟ್ಟಣ-ವಿಜಯವಾಡ ಮಾರ್ಗದ ಎಲ್ಲಾ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಳಗಿನ ಜಾವ 3.30 ರ ನಂತರ ಪ್ರಯಾಣಿಕರನ್ನು ಬೇರೆ ರೈಲಿನಲ್ಲಿ ಸಾಗಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: 35 ಇನ್ನಿಂಗ್ಸ್.. 11 ಶತಕ.. 12 ಅರ್ಧಶತಕ.. ಆದರೂ ಕನ್ನಡಿಗನಿಗೆ BCCI ಅನ್ಯಾಯ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us