ಮಹಿಳೆಯರ ಬೆಚ್ಚಿ ಬೀಳಿಸ್ತಿದೆ ಚಿನ್ನ.. ಮತ್ತೆ 1 ಲಕ್ಷ 30 ಸಾವಿರ ರೂ. ದಾಟಿದೆ..!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಯಾಗ್ತಿಲ್ಲ. ಭಾರತೀಯ ಸಂಪ್ರದಾಯದಲ್ಲಿ ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಆದರೆ ನಿರಂತರವಾಗಿ ಏರುತ್ತಿರುವ ಬೆಲೆಯಿಂದಾಗಿ ಆಭರಣಪ್ರಿಯರು ಕಂಗಾಲಾಗಿದ್ದಾರೆ. ಇವತ್ತಿನ ಬೆಲೆ 1 ಲಕ್ಷ 30 ಸಾವಿರ ರೂ ಗಡಿ ದಾಟಿದೆ.

author-image
Ganesh Kerekuli
Gold
Advertisment

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಡಿಮೆಯಾಗ್ತಿಲ್ಲ. ಭಾರತೀಯ ಸಂಪ್ರದಾಯದಲ್ಲಿ ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಆದರೆ ನಿರಂತರವಾಗಿ ಏರುತ್ತಿರುವ ಬೆಲೆಯಿಂದಾಗಿ ಆಭರಣಪ್ರಿಯರು ಕಂಗಾಲಾಗಿದ್ದಾರೆ. ಚಿನ್ನದ ಇವತ್ತಿನ ಬೆಲೆ 1 ಲಕ್ಷ 30 ಸಾವಿರ ರೂಪಾಯಿ ಗಡಿ ದಾಟಿದೆ. ಬೆಳ್ಳಿಯ ಬೆಲೆ ಕೆಜಿಗೆ 2,01,100 ರೂಪಾಯಿ ಆಗಿದೆ. 

ಪ್ರಮುಖ ನಗರಗಳಲ್ಲಿ ಚಿನ್ನ

  • ದೆಹಲಿಯಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,910 ರೂಪಾಯಿ ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,20,100 ರೂಪಾಯಿ.
  •  ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,760 ರೂಪಾಯಿ ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,19,860 ರೂಪಾಯಿ. 
  •  ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,760 ರೂಪಾಯಿ ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,19,860 ರೂಪಾಯಿ.
  •  ವಿಜಯವಾಡದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,760 ರೂಪಾಯಿ ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,19,860 ರೂ.ಗಳಲ್ಲೇ ಮುಂದುವರಿದಿದೆ.
  •  ಬೆಂಗಳೂರಿನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,30,760 ರೂ.ಗಳಾಗಿದ್ದು, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,19,860 ರೂ.ಗಳಲ್ಲೇ ಮುಂದುವರೆದಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು?

ಜಾಗತಿಕವಾಗಿ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಸೇರಿದಂತೆ ಹಲವು ಅಂಶಗಳಿಂದಾಗಿ ಬೆಲೆ ಏರಿಕೆಯಾಗಿದೆ ಎಂದು ವಿಶ್ಲೇಷಕರು ಹೇಳುತ್ತಾರೆ. ಡಾಲರ್ ದುರ್ಬಲಗೊಳ್ಳುವುದು ಕೂಡ ಒಂದು ಗಮನಾರ್ಹ ಅಂಶ. ಜಾಗತಿಕ ಉದ್ವಿಗ್ನತೆ ಮತ್ತು ಆರ್ಥಿಕ ಅನಿಶ್ಚಿತತೆಯ ಬಗ್ಗೆ ಹೂಡಿಕೆದಾರರು ಹೆಚ್ಚು ಗಮನ ಹರಿಸುತ್ತಿದ್ದಾರೆ. ಪರಿಣಾಮ ತಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ಚಿನ್ನ ಮತ್ತು ಬೆಳ್ಳಿಯಂತಹ ಸುರಕ್ಷಿತ ಹೂಡಿಕೆಗಳತ್ತ ಜನ ಮುಖ ಮಾಡ್ತಿದ್ದಾರೆ. 

ಇದನ್ನೂ ಓದಿ: ಕಂದಕಕ್ಕೆ ಉರುಳಿ ಬಿತ್ತು 37 ಪ್ರಯಾಣಿಕರಿದ್ದ ಬಸ್​.. ಸ್ಥಳದಲ್ಲೇ ಪ್ರಾಣಬಿಟ್ಟ 10 ಪ್ರಯಾಣಿಕರು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

gold rate Gold Digital Gold
Advertisment