/newsfirstlive-kannada/media/media_files/2025/08/15/gst-reforms-by-modi-03-2025-08-15-20-12-31.jpg)
ಅಕ್ಟೋಬರ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆ
ಭಾರತದಲ್ಲಿ ನವರಾತ್ರಿ ವೇಳೆ ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಜಾರಿಗೆ ಬಂದಿತ್ತು. ಇದಾದ ಬಳಿಕ ಅಕ್ಟೋಬರ್, 2025 ರಲ್ಲಿ ಜಿಎಸ್‌ಟಿ ಸಂಗ್ರಹವು ಶೇ.4.6 ರಷ್ಟು ಏರಿಕೆಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹವು 1,95,936 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 1,87,346 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು.
ಅಕ್ಟೋಬರ್ ತಿಂಗಳಲ್ಲಿ ದೇಶೀಯವಾಗಿ 1.45 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದ್ದರೇ, ಅಮದು ಮೂಲಕ 50,884 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ.
2025 ರ ಏಪ್ರಿಲ್ ನಿಂದ ಅಕ್ಟೋಬರ್ ವರೆಗಿನ ಅವಧಿಯಲ್ಲಿ ದೇಶದಲ್ಲಿ 13.89 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. 2024ರ ಇದೇ ಅವಧಿಗೆ ಹೋಲಿಸಿದರೇ, ಶೇ.9 ರಷ್ಟು ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ . 2024 ರ ಏಪ್ರಿಲ್ ನಿಂದ ಅಕ್ಟೋಬರ್ ಅವಧಿಯಲ್ಲಿ 12.74 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿತ್ತು .
/filters:format(webp)/newsfirstlive-kannada/media/post_attachments/wp-content/uploads/2025/07/gst.jpg)
ಅಕ್ಟೋಬರ್ ತಿಂಗಳಲ್ಲಿ ಹೆಚ್ಚಿನ ಜಿಎಸ್‌ಟಿ ಸಂಗ್ರಹವಾಗಿರುವುದು ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಮಾರಾಟ, ಹೆಚ್ಚಿನ ಬೇಡಿಕೆಯನ್ನು ಬಿಂಬಿಸುತ್ತದೆ. ಇದು ಜನರ ಅನುಭೋಗ ಹಾಗೂ ನಿಯಮ ಪಾಲನೆ ಎರಡೂ ಕೂಡ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿರುವುದರ ಪಾಸಿಟಿವ್ ಸೂಚನೆ ಎಂದು ಕೆಪಿಎಂಜಿ ಪರೋಕ್ಷ ತೆರಿಗೆ ಮುಖ್ಯಸ್ಥ ಅಭಿಷೇಕ್ ಜೈನ್ ಹೇಳಿದ್ದಾರೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us