/newsfirstlive-kannada/media/media_files/2025/11/26/school-2025-11-26-11-30-34.jpg)
ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ಮಂಜು ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಗೌತಮ ಬುದ್ಧ ನಗರದ ಜಿಲ್ಲಾಡಳಿತವು ಭಾನುವಾರ ಮಹತ್ವದ ಘೋಷಣೆ ಹೊರಡಿಸಿದೆ. ಜಿಲ್ಲೆಯ ಎಲ್ಲಾ ಪಠ್ಯಕ್ರಮಗಳು ನರ್ಸರಿಯಿಂದ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಜನವರಿ 15ರವರೆಗೆ ರಜೆ ಘೋಷಿಸಲಾಗಿದೆ.
ಇದಕ್ಕೂ ಮೊದಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನೇತೃತ್ವದಲ್ಲಿ ಉತ್ತರ ಪ್ರದೇಶದ ಎಲ್ಲಾ ಶಾಲೆಗಳನ್ನು ಜನವರಿ 5 ರವರೆಗೆ ರಜೆ ಘೋಷಿಸಲಾಗಿತ್ತು. ಭಾರತೀಯ ಹವಾಮಾನ ಇಲಾಖೆಯ (IMD) ರಾಜ್ಯದ 40 ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿಯ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಕಾಶಿ ತಮಿಳು ಸಂಗಮಂ’ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದ ಉತ್ತರ ಪ್ರದೇಶ ಸರ್ಕಾರವು, ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ನಿಯಮಿತವಾಗಿ ತಮಿಳು ಭಾಷಾ ತರಗತಿ ಪರಿಚಯಿಸಲು ಯೋಜಿಸುತ್ತಿದೆ. ಕಾಶಿ ಮತ್ತು ತಮಿಳುನಾಡಿನ ನಡುವಿನ ಪುರಾತನ ನಾಗರಿಕತೆ, ಸಂಸ್ಕೃತಿ ಮತ್ತು ಶೈಕ್ಷಣಿಕ ಸಂಬಂಧ ಎತ್ತಿ ತೋರಿಸುವ ಉದ್ದೇಶ ಈ 'ಕಾಶಿ ತಮಿಳು ಸಂಗಮಂ' ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವು ಹೊಂದಿದೆ.
ಇದನ್ನೂ ಓದಿ:ಗಿಲ್ ಪಡೆಗೆ ಒತ್ತಡ ಹೆಚ್ಚಿಸಿದ ನ್ಯೂಜಿಲೆಂಡ್​.. ಹೇಗಿತ್ತು ಬ್ಯಾಟಿಂಗ್..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us