Advertisment

ರೈಲು ಆಧಾರಿತ ಮೊಬೈಲ್ ಲಾಂಚರ್​​ನಿಂದ ಅಗ್ನಿ-ಪ್ರೈಮ್ ಕ್ಷಿಪಣಿ ಪರೀಕ್ಷೆ ಯಶಸ್ವಿ..! ಇದರ ವಿಶೇಷತೆ ಏನು?

ರಕ್ಷಣಾ ವಲಯದಲ್ಲಿ ಭಾರತ ಮತ್ತೊಂದು ಪ್ರಮುಖ ಪ್ರಗತಿಯನ್ನು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಗ್ನಿ-ಪ್ರೈಮ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ವಿಶೇಷ ಅಂದರೆ ಈ ಕ್ಷಿಪಣಿಯು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಉಡಾಯಿಸಲಾಗಿದೆ.

author-image
Ganesh Kerekuli
Agni-Prime missile (1)
Advertisment

ರಕ್ಷಣಾ ವಲಯದಲ್ಲಿ ಭಾರತ ಮತ್ತೊಂದು ಪ್ರಮುಖ ಪ್ರಗತಿಯನ್ನು ಸಾಧಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಗ್ನಿ-ಪ್ರೈಮ್ ಕ್ಷಿಪಣಿಯನ್ನು (Agni-Prime missile) ಯಶಸ್ವಿಯಾಗಿ ಪರೀಕ್ಷಿಸಿದೆ. ವಿಶೇಷ ಅಂದರೆ ಈ ಕ್ಷಿಪಣಿಯು ರೈಲು ಆಧಾರಿತ ಮೊಬೈಲ್ ಲಾಂಚರ್ (Rail-based mobile launcher) ವ್ಯವಸ್ಥೆಯಿಂದ ಉಡಾಯಿಸಲಾಗಿದೆ.

Advertisment

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರೈಲು ಆಧಾರಿತ ಮೊಬೈಲ್ ಲಾಂಚರ್​ನಿಂದ ಕ್ಷಿಪಣಿ ಪರೀಕ್ಷೆ ನಡೆದಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ ರೈಲು ಆಧಾರಿತ ಮೊಬೈಲ್ ಲಾಂಚರ್ ಪ್ರಯೋಗ ನಡೆದಿರೋದು. ಇದು ಯಾವುದೇ ಷರತ್ತುಗಳಿಲ್ಲದೆ ರೈಲು ಜಾಲದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಮ್ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಆರ್‌ಡಿಒ, ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (SFC) ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ್ದಾರೆ. ಈ ಯಶಸ್ವಿ ಪರೀಕ್ಷೆಯು ದೇಶದಲ್ಲಿ ಕ್ಯಾನಿಸ್ಟರೈಸ್ಡ್ ಉಡಾವಣಾ ವ್ಯವಸ್ಥೆಯನ್ನು (Canisterised launch system) ಅಭಿವೃದ್ಧಿಪಡಿಸುವ ಸಾಮರ್ಥ್ಯವನ್ನು ಹೊಂದಿರುವ ಆಯ್ದ ದೇಶಗಳ ಗುಂಪಿನಲ್ಲಿ ಭಾರತ ಸ್ಥಾನ ಪಡೆದಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಗ್ನಿ-ಪ್ರೈಮ್ ಕ್ಷಿಪಣಿಯ ವೈಶಿಷ್ಟ್ಯಗಳೇನು?

ಅಗ್ನಿ-ಪ್ರೈಮ್ 2,000 ಕಿಲೋಮೀಟರ್‌ಗಳ ದೂರದವರೆಗೆ ಟಾರ್ಗೆಟ್ ಮಾಡಲಿದೆ. ಈ ಕ್ಷಿಪಣಿ ಆಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. DRDO ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ಅಗ್ನಿ-ಪ್ರೈಮ್ ಪರಮಾಣು ಸಿಡಿತಲೆಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ನ್ಯೂ ಜನರೇಷನ್ ಬ್ಯಾಲಿಸ್ಟಿಕ್ ಕ್ಷಿಪಣಿ, ಅಗ್ನಿ-ಪ್ರೈಮ್, ಹೆಚ್ಚಿನ ನಿಖರತೆಯೊಂದಿಗೆ ಎಲ್ಲಾ ಮಿಷನ್ ಉದ್ದೇಶಗಳನ್ನು ಸಾಧಿಸುತ್ತದೆ.

Advertisment

ಭಾರತದ ಇತರ ಮಾರಕ ಕ್ಷಿಪಣಿಗಳು

ಭಾರತದ ಬಳಿಯೂ ಅಗ್ನಿ-1 ರಿಂದ ಅಗ್ನಿ-5 ರವರೆಗಿನ ಕ್ಷಿಪಣಿಗಳಿವೆ. ಅಗ್ನಿ-1 ರಿಂದ ಅಗ್ನಿ-4 ರವರೆಗಿನ ಕ್ಷಿಪಣಿಗಳು 700 ಕಿ.ಮೀ ನಿಂದ 3,500 ಕಿ.ಮೀ ವರೆಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿವೆ. ಅಗ್ನಿ-5 5,000 ಕಿ.ಮೀ ವರೆಗೆ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

Agni-Prime missile rail-based mobile launcher
Advertisment
Advertisment
Advertisment