Advertisment

ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ- CJI ಸೂರ್ಯ ಕಾಂತ್ ಅವರ ಪ್ರಮುಖ 10 ತೀರ್ಪುಗಳು..!

ಫೆಬ್ರವರಿ 9, 2027 ರವರೆಗೆ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಸೇವೆ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ದೀರ್ಘ ಕಾಲ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿರುವ ಅವರು ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

author-image
Ganesh Kerekuli
Justice Surya Kant
Advertisment

ನ್ಯಾಯಮೂರ್ತಿ ಸೂರ್ಯ ಕಾಂತ್ (justice Surya Kant) ಅವರು ದೇಶದ 53ನೇ ಮುಖ್ಯ ನ್ಯಾಯಮೂರ್ತಿಗಳಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಬಿ.ಆರ್. ಗವಾಯಿ ನಿವೃತ್ತಿ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್​ನ ನೂತನ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. 

Advertisment

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಕುಮಾರಸ್ವಾಮಿ, ರಾಜನಾಥ್ ಸಿಂಗ್, ಜೆಪಿ ನಡ್ಡಾ ಸೇರಿದಂತೆ ಅನೇಕ ಗಣ್ಯರು ಸಾಕ್ಷಿಯಾದರು. 

ಇದನ್ನೂ ಓದಿ:ಸಿಂಧ್‌ ಪ್ರಾಂತ್ಯ ಮತ್ತೆ ಭಾರತಕ್ಕೆ ಮರಳುವ ಭರವಸೆ, ರಾಜನಾಥ್ ಸಿಂಗ್ ಹೇಳಿಕೆಗೆ ಪಾಕ್​ಗೆ ಕಂಗಾಲು..!

Justice Surya Kant

ಫೆಬ್ರವರಿ 9, 2027 ರವರೆಗೆ ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಸೇವೆ ಸಲ್ಲಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ದೀರ್ಘ ಕಾಲ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿರುವ ಅವರು ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. 

Advertisment

ನ್ಯಾಯಮೂರ್ತಿ ಸೂರ್ಯ ಕಾಂತ್, ಫೆಬ್ರವರಿ 10, 1962 ರಂದು ಹರಿಯಾಣದ ಹಿಸಾರ್‌ನಲ್ಲಿ ಜನಿಸಿದರು. ಸಾಮಾನ್ಯ ಕುಟುಂಬದಿಂದ ಬಂದಿರುವ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಅತ್ಯುನ್ನತ ಹುದ್ದೆಯನ್ನು ಏರಿದರು. ಆರಂಭದಲ್ಲಿ ಹರಿಯಾಣದ ಹಿಸಾರ್‌ನಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ನಂತರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವೃತ್ತಿಯನ್ನು ಮುಂದುವರೆಸಿದರು. 2018ರಲ್ಲಿ ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು.

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ 10 ಪ್ರಮುಖ ತೀರ್ಪುಗಳು

1) 370ನೇ ವಿಧಿಯ ಬಗ್ಗೆ ಐತಿಹಾಸಿಕ ನಿರ್ಧಾರ

ಜಮ್ಮು ಮತ್ತು ಕಾಶ್ಮೀರದಿಂದ 370 ನೇ (article 370 abrogation) ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಎತ್ತಿಹಿಡಿದ ಸಾಂವಿಧಾನಿಕ ಪಂಚ ಪೀಠದ ಭಾಗವಾಗಿದ್ದರು. 

2) ದೇಶದ್ರೋಹ ಕಾನೂನಿನ ನಿಷೇಧ

ಸೆಕ್ಷನ್ 124A (ದೇಶದ್ರೋಹ) ವನ್ನು ಪರಿಣಾಮಕಾರಿಯಾಗಿ ನಿಷೇಧಿಸಿದ ಪೀಠದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದರು. ಸರ್ಕಾರವು ಕಾನೂನಿನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ಅದನ್ನು ಜಾರಿಗೊಳಿಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡಿದರು.

Advertisment

3) ಪೆಗಾಸಸ್ ಗೂಢಚಾರ ವಿವಾದ

ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ, ತನಿಖೆಗಾಗಿ ಸೈಬರ್ ತಜ್ಞರ ವಿಶೇಷ ಸಮಿತಿಯನ್ನು ರಚಿಸುವ ನಿರ್ಧಾರದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರಮುಖ ಪಾತ್ರವಹಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ಸರ್ಕಾರಕ್ಕೆ ಅನಿಯಮಿತ ಅಧಿಕಾರವನ್ನು ನೀಡಲಾಗುವುದಿಲ್ಲ ಎಂದು ಕೋರ್ಟ್​ ಹೇಳಿತ್ತು.

4) ಬಿಹಾರ ಮತದಾರರ ಪಟ್ಟಿ ವಿವಾದ

ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಹೆಸರುಗಳ ಸಂಪೂರ್ಣ ವಿವರಗಳನ್ನು ಸಾರ್ವಜನಿಕಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದರು.

5) ಮಹಿಳಾ ಹಕ್ಕುಗಳು ಮತ್ತು ಸ್ಥಳೀಯ ಸಂಸ್ಥೆಗಳ ಆಡಳಿತ

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಮಹಿಳಾ ಸರಪಂಚ್ ಒಬ್ಬರನ್ನು ಪುನಃ ನೇಮಿಸಿದರು.  ಅವರನ್ನು ಹುದ್ದೆಯಿಂದ ತೆಗೆದುಹಾಕುವುದು ಕಾನೂನು ಬಾಹಿರ ಎಂದು ಕರೆದರು. ಮಹಿಳೆಯರ ಮೇಲಿನ ತಾರತಮ್ಯ ಸ್ವೀಕಾರಾರ್ಹವಲ್ಲ ಎಂದು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಸೇರಿದಂತೆ ಎಲ್ಲಾ ಬಾರ್ ಅಸೋಸಿಯೇಷನ್‌ಗಳಲ್ಲಿ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ನಿರ್ದೇಶಿಸಿದರು. 

Advertisment

6) ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಅಧಿಕಾರಗಳ ಪರಿಗಣನೆ

ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಅಧಿಕಾರಗಳಿಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳನ್ನು ಆಲಿಸುವ ಸಂವಿಧಾನ ಪೀಠದ ಭಾಗವಾಗಿದ್ದಾರೆ. ಇವು ಇನ್ನೂ ತೀರ್ಮಾನವಾಗಬೇಕಿದೆ.

7) ಪ್ರಧಾನಿ ಮೋದಿಯವರ ಭದ್ರತಾ ಲೋಪದ ತನಿಖೆ

2022 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಯ ಸಮಯದಲ್ಲಿ ಕಂಡುಬಂದ ಭದ್ರತಾ ಲೋಪದ ಬಗ್ಗೆ ನ್ಯಾಯಮೂರ್ತಿ, ಮಲ್ಹೋತ್ರಾ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲು  ಆದೇಶ ನೀಡಿದ್ದಾರೆ. 

8) ಒಂದು ಶ್ರೇಣಿ-ಒಂದು ಪಿಂಚಣಿ (OR-OP)

OROP ಯೋಜನೆಗೆ ಸಾಂವಿಧಾನಿಕ ಮಾನ್ಯತೆ ನೀಡಿ ಅದನ್ನು ಸಮರ್ಥಿಸಿಕೊಂಡಿದ್ದಾರೆ.

9) ಮಹಿಳಾ ಹಕ್ಕುಗಳ ಬಗ್ಗೆ ಬಲವಾದ ನಿಲುವು

ಕಾನೂನು ವೃತ್ತಿ ಮತ್ತು ಸಂಸ್ಥೆಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಇಂದಿನ ಅಗತ್ಯವಾಗಿದೆ. ಆದ್ದರಿಂದ ಬಾರ್ ಅಸೋಸಿಯೇಷನ್‌ಗಳಲ್ಲಿ ಮೀಸಲಾತಿ ಅಗತ್ಯ ಎಂದು ತಮ್ಮ ಪ್ರತ್ಯೇಕ ತೀರ್ಪಿನಲ್ಲಿ ಹೇಳಿದ್ದಾರೆ. 

Advertisment

10) ರಣವೀರ್ ಅಲ್ಲಾಬಾಡಿಯಾ ಪ್ರಕರಣ

ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಲಾಬಾಡಿಯಾ  (Ranveer Allahbadia) ಅವರ ಅವಹೇಳನಕಾರಿ ಕಾಮೆಂಟ್‌ಗಳ ಬಗ್ಗೆ ಅವರು ಎಚ್ಚರಿಕೆ ನೀಡಿದರು. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಸಾಮಾಜಿಕ ರೂಢಿಗಳನ್ನು ಮುರಿಯುವುದಲ್ಲ ಎಂದು ಒತ್ತಿ ಹೇಳಿದ್ದಾರೆ. 

ಇದನ್ನೂ ಓದಿ: ಅಮೃತವಲ್ಲ.. ಅಮ್ಮಂದಿರ ಎದೆಹಾಲಿನಲ್ಲಿ ವಿಷಕಾರಿ ಅಂಶ ಪತ್ತೆ..! ಬಿಹಾರದಲ್ಲಿ ಶಾಂಕಿಗ್ ನ್ಯೂಸ್​..!

ನ್ಯಾಯಾಂಗ ಸಂಸ್ಥೆಗಳಲ್ಲಿ ಪ್ರಮುಖ ಪಾತ್ರ

ನ್ಯಾಯಮೂರ್ತಿ ಸೂರ್ಯ ಕಾಂತ್ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕಾನೂನು ಸಂಸ್ಥೆಗಳಿಗೆ ಕೊಡುಗೆ ನೀಡಿದ್ದಾರೆ. ಅವರು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಕಾನೂನು ಸಮಿತಿಗಳಲ್ಲಿ ಸಕ್ರಿಯ ಪಾತ್ರ ವಹಿಸಿದ ಹೆಗ್ಗಳಿಕೆ ಅವರದ್ದಾಗಿದೆ. 

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Justice Surya Kant
Advertisment
Advertisment
Advertisment