/newsfirstlive-kannada/media/media_files/2025/11/18/brain-eating-ameoba-in-kerala-2025-11-18-18-12-48.jpg)
ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಹಾವಳಿ ಎಚ್ಚರ, ಎಚ್ಚರ
ಕೇರಳದಲ್ಲಿ ಶಬರಿಮಲೆ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕಾಗಿ ನಿತ್ಯ 60 ರಿಂದ 70 ಸಾವಿರ ಭಕ್ತರು ಕಳೆದ ಮೂರು ದಿನಗಳಿಂದ ಆಗಮಿಸುತ್ತಿದ್ದಾರೆ.
ಆದರೇ, ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿ ಇದೆ. ಹೀಗಾಗಿ ಶಬರಿಮಲೆಗೆ ಹೋಗುವ ಕರ್ನಾಟಕ ರಾಜ್ಯದ ಭಕ್ತರೇ ಎಚ್ಚರ ಎಚ್ಚರ...! ಆರೋಗ್ಯ ಇಲಾಖೆಯಿಂದ ಎಚ್ಚರ ವಹಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಭಕ್ತರಿಗೆ ಸುರಕ್ಷತಾ ಸಲಹಾ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಹೊರಡಿಸಿದೆ. ನೇಗೇರಿಯಾ ಫೌಲೇರಿ ಕುರಿತು ಮುನ್ನೆಚ್ಚರಿಕೆ ವಹಿಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಮಾರ್ಗಸೂಚಿಯಲ್ಲಿ ಏನಿದೆ..?
ನೇಗೇರಿಯಾ ಫೌಲೇರಿ ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ . ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆಗಳಲ್ಲಿ ವಾಸ ಮಾಡುತ್ತೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೆಗೋರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮ ಜೀವಿ. ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಲಿದೆ . ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ಗಳನ್ನು ಬಳಸಿ. ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿಯುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ರೋಗದ ಲಕ್ಷಣ ಕಂಡು ಬಂದಲ್ಲಿ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
ರೋಗದ ಲಕ್ಷಣಗಳೇನು?
ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವ್ರ ತಲೆನೋವು
ವಾಕರಿಕೆ/ವಾಂತಿ, ಕುತ್ತಿಗೆ ಬಿಗಿತ ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು
/filters:format(webp)/newsfirstlive-kannada/media/media_files/2025/11/18/brain-eating-ameoba-in-kerala02-2025-11-18-18-21-57.jpg)
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us