ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು -ಭಾರತ ಕೊಟ್ಟ ಭರವಸೆಯೇನು?

SCO ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ನಾಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಪುಟಿನ್ ಭೇಟಿಗೂ ಮುನ್ನವೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತನ್ನಾಡಿದ್ದಾರೆ.

author-image
Ganesh Kerekuli
PM Modi (2)
Advertisment

SCO ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. ನಾಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಪುಟಿನ್ ಭೇಟಿಗೂ ಮುನ್ನವೇ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಜೊತೆ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತನ್ನಾಡಿದ್ದಾರೆ.

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಭಾರತ ಎಲ್ಲಾ ಸಂಭಾವ್ಯ ಬೆಂಬಲ ನೀಡುವ ಭರವಸೆಯನ್ನು ಝೆಲೆನ್ಸ್ಕಿಗೆ ನೀಡಿದ್ದಾರೆ. ಮಾತುಕತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋದಿ, ದೂರವಾಣಿ ಕರೆ ಮಾಡಿದ್ದಕ್ಕಾಗಿ ಅಧ್ಯಕ್ಷ ಝೆಲೆನ್ಸ್ಕಿಗೆ ಧನ್ಯವಾದಗಳು. ಉಕ್ರೇನ್​​ನಲ್ಲಿ ನಡೆಯುತ್ತಿರುವ ಸಂಘರ್ಷ, ಮಾನವೀಯ ಅಂಶ, ಶಾಂತಿ ಮತ್ತು ಸ್ಥಿರತೆ ಪುನಃಸ್ಥಾಪಿಸುವ ಪ್ರಯತ್ನಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದಿದ್ದಾರೆ. 

ಇದನ್ನೂ ಓದಿ:7 ವರ್ಷಗಳ ಬಳಿಕ ಪ್ರಧಾನಿ ಮೋದಿ ಚೀನಾ ಭೇಟಿ.. ಹೇಗಿತ್ತು ಸ್ವಾಗತ..? Photos

ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಚೀನಾದಲ್ಲಿರುವ ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Modi Zelensky call PM Modi China visit SCO Summit 2025
Advertisment