ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್‌ : ನಾಳೆ ಅಧಿಕಾರ ಸ್ವೀಕಾರ

ಬಿಹಾರದ ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು 37 ಸೆಟ್ ನಾಮಪತ್ರಗಳನ್ನು ನಿತಿನ್ ನಬಿನ್ ಹೆಸರು ಸೂಚಿಸಿ ಸಲ್ಲಿಸಲಾಗಿತ್ತು. ಅವಿರೋಧ ಆಯ್ಕೆಯನ್ನು ಘೋಷಿಸಲಾಗಿದೆ. ನಾಳೆ ನಿತಿನ್ ನಬಿನ್ ಅಧಿಕಾರ ಸ್ವೀಕರಿಸುವರು.

author-image
Chandramohan
BJP NEW NATIONAL WORKING PREZ NITIN NABIN

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ

Advertisment
  • ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ
  • ಇಂದು ಅವಿರೋಧವಾಗಿ ಆಯ್ಕೆಯಾದ ನಿತಿನ್ ನಬಿನ್
  • ನಾಳೆ ಅಧಿಕೃತವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
  • ಹೊಸ ತಂಡ ರಚಿಸಿಕೊಳ್ಳುವ ನಿತಿನ್ ನಬಿನ್

ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು ನಿತಿನ್ ನಬಿನ್ ಮಾತ್ರ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.  ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಅವಕಾಶ ನೀಡಲಾಗಿತ್ತು. ನಿತಿನ್ ನಬಿನ್ ಅವರ ಹೆಸರು ಅನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಬಳಿಕ ನಾಮಪತ್ರ ಪರಿಶೀಲನೆ, ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿತ್ತು. ನಿತಿನ್ ನಬಿನ್ ಒಬ್ಬರೇ  ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.  ನಿತಿನ್ ನಬಿನ್ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಾಳೆ ಅಧಿಕೃತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವರು. ಕಳೆದೊಂದು ತಿಂಗಳಿನಿಂದ ನಿತಿನ್ ನಬಿನ್ ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದಾರೆ. 
ನಿತಿನ್ ನಬಿನ್ ಹೊಸ ರಾಷ್ಟ್ಪೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿಕೊಂಡು ತಮ್ಮ ತಂಡ ರಚಿಸಿಕೊಳ್ಳುವರು. ಕರ್ನಾಟಕದ ಸಿ.ಟಿ.ರವಿಗೆ ಮತ್ತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಗುವ ಸಾಧ್ಯತೆ ಇದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

NITIN NABIN BJP NATIONAL PREZ NITIN NABIN
Advertisment