Advertisment

10ನೇ ಬಾರಿಗೆ CM ಆಗಿ ನಿತೀಶ್ ಕುಮಾರ್ ಪದಗ್ರಹಣ.. ನೂತನ ಸರ್ಕಾರದಲ್ಲಿ 26 ಸಚಿವರು!

ಬರೋಬ್ಬರಿ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್​ ಪದಗ್ರಹಣ ಮಾಡಿದ್ದಾರೆ. ಕಳೆದ ಬಾರಿಯಂತೆ ಈ ಬಾರಿಯೂ ಇಬ್ಬರು ಡಿಸಿಎಂಗಳಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 26 ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು.

author-image
Ganesh Kerekuli
Nitishe kumar
Advertisment

ಬರೋಬ್ಬರಿ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್​ ಪದಗ್ರಹಣ ಮಾಡಿದ್ದಾರೆ. 

Advertisment

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಒಕ್ಕೂಟ ಅಭೂತಪೂರ್ವ ದಿಗ್ವಿಜಯ ಸಾಧಿಸಿದೆ. ಅದರಂತೆ ಇಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್​ಡಿಎಯ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಬಾರಿಯೂ ಇಬ್ಬರು ಡಿಸಿಎಂಗಳಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 26 ಸಚಿವರು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. 

ಚುನಾವಣಾ ಆಯೋಗವು ಬಿಹಾರದ 18ನೇ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಮೊದಲ ಮತ್ತು ಎರಡನೇ ಹಂತದ ಮತದಾನವನ್ನು ನಡೆಸಿತು. 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ನವೆಂಬರ್ 14 ರಂದು ನಡೆದಿತ್ತು. ಎನ್​ಡಿಎ ಒಕ್ಕೂಟ 202 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. 

Advertisment

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bihar election Nitish Kumar
Advertisment
Advertisment
Advertisment