/newsfirstlive-kannada/media/media_files/2025/11/04/train-accident-2025-11-04-17-51-34.jpg)
ಪ್ರಯಾಣಿಕ ರೈಲು ಮತ್ತು ಗೂಡ್ಸ್​ ಟ್ರೈನ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಛತ್ತೀಸ್​ಗಢದ ಬಿಲಸ್ಪುರ ರೈಲ್ವೇ ನಿಲ್ದಾಣದ ಬಳಿ ದುರ್ಘಟನೆ ಸಂಭವಿಸಿದೆ.
ಇಂದು ಸಂಜೆ 4 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೇ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ: ಸಾವಿನಲ್ಲೂ ಒಂದಾದ ಬೀಳಗಿ ಪಟ್ಟಣದ ದಂಪತಿ!: ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೆ ಹೃದಯಾಘಾತ!!
ಸ್ಥಳದಲ್ಲೇ ಬೀಡು ಬಿಟ್ಟಿರುವ ಅಧಿಕಾರಿಗಳು, ಘಟನೆ ಹೇಗಾಯಿತು ಎಂದು ಪರಿಶೀಲನೆ ನಡೆಸ್ತಿದ್ದಾರೆ. ಜೊತೆಗೆ ದುರಂತದಲ್ಲಿ ಸಿಲುಕಿಕೊಂಡವರ ರಕ್ಷಿಸುವ ಕೆಲಸವನ್ನೂ ಮಾಡ್ತಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ದುರ್ಘಟನೆಯ ಫೋಟೋ ಹಾಗೂ ವಿಡಿಯೋಗಳು ಹರಿದಾಡಿವೆ. ಘಟನೆ ಬಳಿಕ ರೈಲು ಸಂಚಾರದಲ್ಲಿ ಅಸ್ತವ್ಯಸ್ತವಾಗಿದ್ದು, ಅಧಿಕಾರಿಗಳು ದುರಸ್ತಿಕಾರ್ಯ ನಡೆಸ್ತಿದ್ದಾರೆ. ಶೀಘ್ರದಲ್ಲೇ, ರೈಲು ಸಂಚಾರ ಸಹಜ ಸ್ಥಿತಿಯತ್ತ ಮರಳಲಿದೆ.
ಇದನ್ನೂ ಓದಿ: ಸಾವಿನಲ್ಲೂ ಒಂದಾದ ಬೀಳಗಿ ಪಟ್ಟಣದ ದಂಪತಿ!: ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೆ ಹೃದಯಾಘಾತ!!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us