ಸ್ನೇಹಿತನಿಗೆ ಹುಟ್ಟುಹಬ್ಬದ ಶುಭಾಶಯ ಎಂದ ಟ್ರಂಪ್.. ಮೋದಿ ಪ್ರತಿಕ್ರಿಯಿಸಿದ್ದು ಹೇಗೆ ಗೊತ್ತಾ..?

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಂದ್ಹಾಗೆ ಮೋದಿ ಅವರು ಇಂದು ತಮ್ಮ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ.

author-image
Ganesh Kerekuli
modi and trump
Advertisment

ಪ್ರಧಾನಿ ನರೇಂದ್ರ ಮೋದಿಗೆ (Narendra modi) ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಅಂದ್ಹಾಗೆ ಮೋದಿ ಅವರು ಇಂದು ತಮ್ಮ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. 

ತಮ್ಮ ಸೋಶಿಯಲ್ ಮೀಡಿಯಾ ಟ್ರುತ್​ನಲ್ಲಿ ಬರೆದುಕೊಂಡಿರುವ ಟ್ರಂಪ್, ನನ್ನ ಸ್ನೇಹಿತ ನರೇಂದ್ರ ಮೋದಿಗೆ ಫೋನ್ ಕರೆ ಮಾಡಿ ಜನ್ಮದಿನದ ಶುಭಾಶಯಗಳನ್ನು ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸುವಲ್ಲಿ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದಿದ್ದಾರೆ. 

ಇದನ್ನೂ ಓದಿ:ದೈವಭಕ್ತಿ ಮೆರೆದ KL​ ರಾಹುಲ್.. ಪ್ರಸಿದ್ಧ ದೇಗುಲಕ್ಕೆ ಆನೆ ಉಡುಗೊರೆ..!

ಮೋದಿ ಉತ್ತರ ಹೇಗಿತ್ತು..? 

ಟ್ರಂಪ್  ಅವರ ಶುಭಾಶಯಕ್ಕೆ ಉತ್ತರಿಸಿರುವ ಮೋದಿ, ‘ಧನ್ಯವಾದಗಳು ಸ್ನೇಹಿತ’ ಎಂದಿದ್ದಾರೆ. ನನ್ನ ಹುಟ್ಟುಹಬ್ಬಕ್ಕೆ ಕರೆ ಮಾಡಿ ಪ್ರೀತಿಯಿಂದ ಶುಭಾಶಯ ಕೋರಿದ್ದಕ್ಕೆ ಧನ್ಯವಾದಗಳು. ನಿಮ್ಮಂತೆಯೇ, ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ನಿಮ್ಮ ನಿರ್ಧಾರಗಳನ್ನ ಬೆಂಬಲಿಸುತ್ತೇವೆ ಎಂದಿದ್ದಾರೆ. 

ಮನಸ್ಸಿಗೆ ಬಂದ ಹಾಗೇ ಸುಂಕ ಏರಿಸಿ ಟ್ರಂಪ್ ಭಾರತದ ಆಕ್ರೋಶಕ್ಕೆ ಕಾರಣರಾಗಿದ್ದರು. ಇದೀಗ ಭಿನ್ನಾಭಿಪ್ರಾಯಗಳನ್ನ ಬದಿಗಿಟ್ಟು ಮೋದಿಗೆ ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ. 

ಇದನ್ನೂ ಓದಿ:ಆಪರೇಷನ್ ಸಿಂಧೂರನಲ್ಲಿ ಮೌಲಾನಾ ಮಸೂದ್ ಫ್ಯಾಮಿಲಿ ಛಿದ್ರ ಛಿದ್ರ.. ಒಪ್ಪಿಕೊಂಡ ಪಾಪಿ ಪಾಕ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Narendra Modi birthday Pm Narendra Modi DONALD TRUMP trump and modi PM Modi
Advertisment