ದೆಹಲಿಯ ಕೆಂಪು ಕೋಟೆಯಲ್ಲಿ 12ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 12ನೇ ಬಾರಿಗೆ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದರು.

author-image
Bhimappa
PM_MODI_RED_PORT_2
Advertisment

ನವದೆಹಲಿ: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಭಾಷಣ ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಳಗ್ಗೆ ರಾಜ್​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಕೆ ಮಾಡಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ ಮಾಡಿದರು. ಎಲ್ಲರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿ ಅವರು ಒಟ್ಟು 12 ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ.  

RED_PORT (1)

ಹೆಲಿಕಾಪ್ಟರ್ ಮೂಲಕ ಹೂಮಳೆಸುರಿಸಿದ್ದು ಅಲ್ಲಿದ್ದವರ ಕಣ್ಮನ ಸೆಳೆಯಿತು. ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನ ಸ್ಥಳದಿಂದಲೇ 5 ಸಾವಿರ ಜನರು ಕಣ್ತುಂಬಿಕೊಂಡರು. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಕೆಂಪು ಕೋಟೆ ಭದ್ರೆತೆ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಸಿಸಿಟಿವಿಗಳು ಹದ್ದಿನ ಕಣ್ಣು ಇಟ್ಟಿದ್ದವು. ಅಲ್ಲದೇ ಯಾವುದೇ ಡ್ರೋನ್ ಹಾರಿಸಲು ಅವಕಾಶ ನೀಡಿಲ್ಲ. ಈ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಗೃಹಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಸಂಸದ ವಿ.ಸೋಮಣ್ಣ ಸೇರಿದಂತೆ ಸಚಿವರು, ಸಂಸದರು, ಸದಸ್ಯರು ಸೇರಿ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Pm Narendra Modi India Independence Day 2025 Mahatma Gandhi
Advertisment