Advertisment

ಪ್ರಧಾನಿ ಮೋದಿಗೆ ರಶ್ಮಿಕಾ-ವಿಜಯ್ ಮದುವೆ ಆಮಂತ್ರಣ.. ಮಾರ್ಚ್ 4ರ ರಿಸೆಪ್ಷನ್‌ಗೆ ಬರ್ತಾರಾ ನಮೋ?

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ರೌಡಿ ಸ್ಟಾರ್ ವಿಜಯ್ ದೇವರಕೊಂಡ ಅವರ ಮದುವೆ ಸಂಭ್ರಮ ಜೋರಾಗಿದೆ. ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ತಾರಾ ಜೋಡಿ, ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

author-image
Ganesh Kerekuli
rashmika mandanna (19)
Advertisment

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ರೌಡಿ ಸ್ಟಾರ್ ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ಸಂಭ್ರಮ ಜೋರಾಗಿದೆ. ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಈ ತಾರಾ ಜೋಡಿ, ಇದೀಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮ್ಮ ಆರತಕ್ಷತೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದೆ.

Advertisment

ಮೋದಿಗೆ ಖುದ್ದು ಆಹ್ವಾನ

ವಿಜಯ್ ಮತ್ತು ರಶ್ಮಿಕಾ ಅವರು ಪ್ರಧಾನಿ ಮೋದಿ ಅವರನ್ನು ಖುದ್ದಾಗಿ ಭೇಟಿಯಾಗಿದ್ದಾರೆ. ಈ ವೇಳೆ ನವಜೋಡಿ ಪ್ರಧಾನಿಯವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಲ್ಲದೆ, ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ಆರತಕ್ಷತೆ (Wedding Reception) ಕಾರ್ಯಕ್ರಮಕ್ಕೆ ಬರುವಂತೆ ವಿನಂತಿಸಿಕೊಂಡಿದ್ದಾರೆ. 

ಇದನ್ನೂ ಓದಿ:ಹೋಳಿ ಹಬ್ಬದಂದೇ ‘ಚಂದ್ರಗ್ರಹಣ’ ನೆರಳು; ನಿಮ್ಮ ಗೊಂದಲಗಳಿಗೆ ಇಲ್ಲಿದೆ ಉತ್ತರ..!

rashmika mandanna (20)

ಹೈದರಾಬಾದ್‌ಗೆ ಬರ್ತಾರಾ ಮೋದಿ?

ಸ್ಟಾರ್ ಜೋಡಿಯ ಈ ನಡೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ದೇಶದ ಗಣ್ಯರು, ರಾಜಕೀಯ ನಾಯಕರು ಮತ್ತು ಸಿನಿಮಾ ತಾರೆಯರು ಭಾಗವಹಿಸಲಿರುವ ಈ ಹೈ-ಪ್ರೊಫೈಲ್ ಆರತಕ್ಷತೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಆಗಮಿಸುತ್ತಾರಾ ಎಂಬ ಪ್ರಶ್ನೆ ಈಗ ಎಲ್ಲರಲ್ಲೂ ಮೂಡಿದೆ. ಈಗಾಗಲೇ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಸೇರಿದಂತೆ ಹಲವು ಸೆಲೆಬ್ರಿಟಿಗಳ ಆರತಕ್ಷತೆಗೆ ಮೋದಿ ಅವರು ಹೋಗಿ ಶುಭ ಹಾರೈಸಿದ ಉದಾಹರಣೆಗಳಿವೆ. ಹೀಗಾಗಿ ಹೈದರಾಬಾದ್ ರಿಸೆಪ್ಷನ್‌ಗೂ ನಮೋ ಎಂಟ್ರಿ ಕೊಡಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.

Advertisment

ಮಾರ್ಚ್ 4ಕ್ಕೆ ಗ್ರ್ಯಾಂಡ್ ರಿಸೆಪ್ಷನ್

ಫೆಬ್ರವರಿ 26 ರಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿಜಯ್-ರಶ್ಮಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮಾರ್ಚ್ 4 ರಂದು ಚಿತ್ರರಂಗದ ಗಣ್ಯರು ಹಾಗೂ ಸ್ನೇಹಿತರಿಗಾಗಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈಗಾಗಲೇ ಪ್ಯಾನ್ ಇಂಡಿಯಾ ಸ್ಟಾರ್‌ಗಳಾಗಿ ಮಿಂಚುತ್ತಿರುವ ಈ ಜೋಡಿಯ ಮದುವೆ, ಇದೀಗ ಪ್ರಧಾನಿ ಮೋದಿಯವರ ಆಹ್ವಾನದ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ.

ಇದನ್ನೂ ಓದಿ:ಮತ್ತೆ ಇರಾನ್- ಇಸ್ರೇಲ್ ಯುದ್ಧದ ಸಂಘರ್ಷ ಶುರು : ಇರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇಸ್ರೇಲ್‌

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

vijay deverakonda rashmika mandanna Rashmika Mandanna, vijay devarakonda
Advertisment
Advertisment
Advertisment