/newsfirstlive-kannada/media/media_files/2025/09/23/modi-navarhri-fasting02-2025-09-23-14-55-26.jpg)
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್​​ಎಸ್​ಎಸ್​) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಾಳೆ ದೆಹಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಶೇಷ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.
ಆರ್​ಎಸ್​ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಹಾರಾಷ್ಟ್ರದಲ್ಲಿ 1925ರಲ್ಲಿ ಕೇಶವ್​ ಬಲಿರಾಮ್​ ಹೆಡ್ಗೆವಾರ್​ ಅವರಿಂದ ಆರ್​ಎಸ್​ಎಸ್​ ಸ್ಥಾಪನೆ ಆಯಿತು. ನಾಗರಿಕರಲ್ಲಿ ಸಾಂಸ್ಕೃತಿಕ ಅರಿವು, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಗುರಿಯನ್ನು ಹೊಂದಲು ಸಂಘ ಸ್ಥಾಪನೆಯಾಯಿತು. ದಿನ ಕಳೆದಂತೆ ಮುಂದೆ ಇದು ಧರ್ಮ ಸಂಘಟನೆ, ದೇಶಭಕ್ತಿ ಸಂಘಟನೆಯಾಗಿ ಬೆಳೆಯಿತು. ​
ಇದನ್ನೂ ಓದಿ: ಮಹಿಷಾಸುರ ಟ್ಯಾಕ್ಸ್- ಬ್ರಹ್ಮರಾಕ್ಷಸ ಟ್ಯಾಕ್ಸ್; ಪ್ರಹ್ಲಾದ್​ ಜೋಶಿ ವಿರುದ್ಧ ರಾಮಲಿಂಗಾರೆಡ್ಡಿ ಕಿಡಿ..ಕಿಡಿ
/filters:format(webp)/newsfirstlive-kannada/media/post_attachments/wp-content/uploads/2025/03/MODI-VISIT-RSS-HEADQUARTERS.jpg)
ಭಾರತದ ಸರ್ವತೋಮುಖ ಅಭಿವೃದ್ಧಿಯನ್ನು ಉತ್ತೇಜಿಸುವುದು ಆರ್‌ಎಸ್‌ಎಸ್​ನ ಮುಖ್ಯ ಗುರಿಯಾಗಿದೆ. ಈ ಸಂಸ್ಥೆ ಮಾತೃಭೂಮಿಯ ಮೇಲಿನ ಭಕ್ತಿ, ಸ್ವಯಂ ಸಂಯಮ, ಧೈರ್ಯ ಮತ್ತು ಶೌರ್ಯದಂತ ಗುಣಗಳನ್ನು ಪ್ರೋತ್ಸಾಹಿಸುತ್ತದೆ.
ಕಳೆದ 100 ವರ್ಷಗಳಲ್ಲಿ ಆರ್‌ಎಸ್‌ಎಸ್ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ ಹಾಗೂ ವಿಪತ್ತು ಪರಿಹಾರದಂತ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಪ್ರವಾಹ, ಭೂಕಂಪ ಮತ್ತು ಚಂಡಮಾರುತಗಳಂತಹ ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗವಹಿಸಿ ಸಹಾಯ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us