/newsfirstlive-kannada/media/media_files/2025/08/30/narendra-modi-in-china-8-2025-08-30-20-30-13.jpg)
ಬರೋಬ್ಬರಿ 7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚೀನಾಗೆ ಭೇಟಿ ನೀಡಿದ್ದಾರೆ. ಶಾಂಘೈ ಸಹಕಾರ ಸಂಸ್ಥೆಯ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಟಿಯಾಂಜಿನ್ ತಲುಪಿದ್ದಾರೆ.
ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಚೀನಾದಲ್ಲಿರುವ ಭಾರತೀಯರು ತ್ರಿವರ್ಣ ಧ್ವಜವನ್ನು ಬೀಸುತ್ತಾ, ಭಾರತ್ ಮಾತಾ ಕಿ ಜೈ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು.
ಇದನ್ನೂ ಓದಿ: 7 ವರ್ಷಗಳ ಬಳಿಕ ಪ್ರಧಾನಿ ಮೋದಿ ಚೀನಾ ಭೇಟಿ.. ಹೇಗಿತ್ತು ಸ್ವಾಗತ..? Photos
ಇವತ್ತಿನಿಂದ ಎರಡು ದಿನಗಳ ಕಾಲ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ನಡೆಯಲಿದೆ. ಚೀನಾ ತಲುಪುತ್ತಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ಸ್ ನೀಡಿದ್ದಾರೆ. ‘ನಾನು ಟಿಯಾಂಜಿನ್ ತಲುಪಿದ್ದೇನೆ. SCO ಶೃಂಗಸಭೆಯಲ್ಲಿ ವಿವಿಧ ದೇಶಗಳ ನಾಯಕರೊಂದಿಗೆ ಆಳವಾದ ಚರ್ಚೆಗಳನ್ನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ - ಕಿಚ್ಚ ಸುದೀಪ್ ಹಸಿರು ಕ್ರಾಂತಿ
ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ನಡುವಿನ ಭೇಟಿಯ ಮೇಲೆ ವಿಶ್ವದ ಕಣ್ಣು ನೆಟ್ಟಿದೆ. ಏಳು ವರ್ಷಗಳ ನಂತರ ಇಬ್ಬರು ನಾಯಕರು ಇವತ್ತು ಮುಖಾಮುಖಿ ಆಗುತ್ತಿದ್ದಾರೆ. ಇಬ್ಬರ ನಡುವಿನ ಮಾತುಕತೆಗಳು ಭಾರತ-ಚೀನಾ ಸಂಬಂಧಗಳನ್ನು ಪರಿಶೀಲಿಸುತ್ತವೆ. ವ್ಯಾಪಾರ ಮತ್ತು ಗಡಿ ವಿವಾದಗಳ ಭವಿಷ್ಯದ ಸ್ಥಿತಿಯನ್ನು ಚರ್ಚಿಸುತ್ತವೆ ಎಂದು ನಂಬಲಾಗಿದೆ.
ಇದನ್ನೂ ಓದಿ:ಪೋಲೆಂಡ್‌ನಲ್ಲಿ ಎಫ್-16 ಫೈಟರ್ ಜೆಟ್ ಪತನ, ದುರಂತದ ವಿಡಿಯೋ ನೋಡಿ
ಕಳೆದ ವರ್ಷ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತ ಚೀನಾ ಮುಖಾಮುಖಿ ಆಗಿದ್ದವು. ಈ ವೇಳೆ ಗಡಿ ಗಸ್ತು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಭಾರತ-ಯುಎಸ್ ಸಂಬಂಧಗಳಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮೋದಿ ಅವರ ಭೇಟಿ ತುಂಬಾನೇ ಮಹತ್ವ ಪಡೆದುಕೊಂಡಿದೆ. ಇನ್ನು ರಷ್ಯಾ ಅಧ್ಯಕ್ಷ ಪುಟಿನ್ ಜೊತೆಯೂ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ.
SCO ಎಂದರೇನು?
SCO ಅನ್ನು 2001ರಲ್ಲಿ ಸ್ಥಾಪಿಸಲಾಯಿತು. ಭಾರತ, ಚೀನಾ, ರಷ್ಯಾ, ಪಾಕಿಸ್ತಾನ, ಇರಾನ್ ಮತ್ತು ಮಧ್ಯ ಏಷ್ಯಾದ ದೇಶಗಳು SCO ಸದಸ್ಯ ರಾಷ್ಟ್ರಗಳಾಗಿವೆ. ಭಾರತವು 2017ರಲ್ಲಿ SCO ಸದಸ್ಯ ದೇಶವಾಯಿತು. 2022-23 ರಲ್ಲಿ ಸಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಿತ್ತು.
ಇದನ್ನೂ ಓದಿ:ಅಮೆರಿಕ ಹೊಸ ತೆರಿಗೆ ನೀತಿ.. ಎಷ್ಟು ಲಕ್ಷ ಕೋಟಿ ರಫ್ತಿನ ಮೇಲೆ ಪರಿಣಾಮ ಬೀರುತ್ತದೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ