/newsfirstlive-kannada/media/media_files/2025/08/16/shubhanshu_shukla-1-2025-08-16-22-41-38.jpg)
ನವದೆಹಲಿ: ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕವಾಗಿ ಭೇಟಿ ನೀಡಿದ್ದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ನಾಳೆ (ಆ.17) ಭಾರತಕ್ಕೆ ಬರುತ್ತಿದ್ದಾರೆ. ಒಂದು ವರ್ಷದಿಂದ ಅಮೆರಿಕದಲ್ಲಿ ಶುಭಾಂಶು ಶುಕ್ಲಾ ಆಕ್ಸಿಯಂ-4 ಬಗ್ಗೆ ತರಬೇತಿ ಪಡೆದು, ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ತವರಿಗೆ ಮರಳುತ್ತಿದ್ದಾರೆ.
ಭಾರತಕ್ಕೆ ಆಗಮಿಸಲಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮೊದಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಉತ್ತರ ಪ್ರದೇಶದ ಲಖನೌಗೆ ತೆರಳಿ ತಮ್ಮ ಕುಟುಂಬವನ್ನು ಭೇಟಿ ಮಾಡಲಿದ್ದಾರೆ. ಇದರ ಜೊತೆಗೆ ಆಗಸ್ಟ್ 22 ಹಾಗೂ 23 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಶುಭಾಂಶು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಡಿವೋರ್ಸ್ ಬಗ್ಗೆ ಪತ್ರ ಬರೆದು ಅಜಯ್ ರಾವ್ ಮನವಿ.. ಏನು ಹೇಳಿದರು?
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2027ರಲ್ಲಿ ಕೈಗೊಳ್ಳಲಿರುವ ಮಾನವ ಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ನಾಸಾ ಜೊತೆ ನಡೆಸಿದ ಮಾನವ ಸಹಿತ ಬಾಹ್ಯಾಕಾಶ ಯಾನದಲ್ಲಿ ಶುಭಾಂಶು ಶುಕ್ಲ ಅವರು ಯಶಸ್ಸು ಕಂಡಿದ್ದಾರೆ. ಸತತ 18 ದಿನಗಳು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿದ್ದು ವಾಪಸ್ ಆಗಿದ್ದರು. ಬಳಿಕ ಅಮೆರಿಕದಲ್ಲೇ ಉಳಿದುಕೊಂಡಿದ್ದರು. ಆದ್ರೆ ಈಗ ವಿಮಾನದ ಮೂಲಕ ತವರಿಗೆ ಬರುತ್ತಿದ್ದಾರೆ.
ಶುಭಾಂಶು ಶುಕ್ಲಾ ಅವರು ಜೂನ್ 25 ರಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಆರಂಭಿಸಿದ್ದರು. ಇವರೊಂದಿಗೆ ಪೊಲೆಂಡ್ನ ಸ್ಲಾವೊಸ್ಟ್ ಉಜ್ನಾಸ್ಕಿ, ಹಂಗೇರಿಯ ಟಿಬೋರ್ ಕಾಪು ಹಾಗೂ ಪಿಗ್ಗಿ ವಿಟ್ಸನ್ ಅವರು ಇದ್ದರು. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ