/newsfirstlive-kannada/media/media_files/2025/08/12/bus_fire_rajasthan-2025-08-12-13-43-08.jpg)
ಜೈಪುರ: ಸ್ಲೀಪರ್ ಬಸ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಜೀವ ಬಿಟ್ಟಿದ್ದು ಕೆಲ ಪ್ರಯಾಣಿಕರಿಗೆ ಗಂಭೀರವಾದ ಸುಟ್ಟ ಗಾಯಗಳು ಆಗಿವೆ. ಈ ಘಟನೆಯು ರಾಜಸ್ಥಾನದ ಜಲೋರ್ ಜಿಲ್ಲೆಯ ಸಂಚೋರ್ ಬಳಿಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 68ರಲ್ಲಿ ಖಾಸಗಿ ಸ್ಲೀಪರ್ ಬಸ್, ಬೈಕ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದ್ದರಿಂದ ಮೂವರು ಜೀವ ಕಳೆದುಕೊಂಡಿದ್ದಾರೆ. ಬಸ್ ಡಿಕ್ಕಿಯಾಗುತ್ತಿದ್ದಂತೆ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದ್ದು ದೊಡ್ಡ ಮಟ್ಟದ ಹೊಗೆ ಕೂಡ ಆವರಿಸಿಕೊಂಡಿತ್ತು. ಬಸ್ನಲ್ಲಿ ಕೆಲವು ಜನರಿಗೆ ಸುಟ್ಟ ಗಾಯಗಳು ಆಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಶುಭ್ಮನ್ ಗಿಲ್ಗೆ ಆಫರ್ ಮೇಲೆ ಆಫರ್.. ಯುವರಾಜನಿಗೆ ಒಲಿಯುತ್ತಾ ಈ ಪಟ್ಟ?
ಬೈಕ್ ಹಾಗೂ ಬಸ್ ಎರಡು ಮುಖಾಮುಖಿ ಡಿಕ್ಕಿಯಾಗಿದ್ದು ಕ್ಷಣದಲ್ಲೇ ಬೆಂಕಿ ಭಾರೀ ಮಟ್ಟದಲ್ಲಿ ಹೊತ್ತಿಕೊಂಡಿದೆ. ಇದರಿಂದಲೇ ಬಸ್ ಒಳಗಿದ್ದ ಪ್ರಯಾಣಿಕರು ಒಳಗೆ ಸಿಕ್ಕಿಕೊಂಡಿದ್ದರು. ತಕ್ಷಣ ಸ್ಥಳೀಯರು ರಕ್ಷಣೆ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿತು ಎನ್ನಲಾಗಿದೆ. ಇನ್ನು ಬಸ್, ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪೊಲೀಸರು ಕೂಡ ಬಂದಿದ್ದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಘಟನೆಗೆ ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ