Advertisment

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ವೆಂಕಟೇಶ್ವರ ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ದಾರುಣ ಸಾವು

ಆಂಧ್ರಪ್ರದೇಶದ ಜನರು ಹೆಚ್ಚು ಆಸ್ತಿಕರು. ಇಂದು ಏಕಾದಶಿಯ ಕಾರಣದಿಂದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ದೇವಸ್ಥಾನಕ್ಕೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು. ಆದರೇ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿ 9 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

author-image
Chandramohan
andhra stamepede03
Advertisment

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಕಾಲ್ತುಳಿತ ಪ್ರಕರಣದಲ್ಲಿ 9 ಜನ ಸಾವನ್ನಪ್ಪಿದ್ದಾರೆ.  ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ದೇವಸ್ಥಾನದಲ್ಲಿ ಭಾರಿ ಭಕ್ತಾದಿಗಳು ಬಂದಿರೋ ಹಿನ್ನಲೆ ಕಾಲ್ತುಳಿತ ಸಂಭವಿಸಿದೆ.  ಜೊತೆಗೆ ತುಂಬಾ ಜನರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .  ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ. 

Advertisment

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಶ್ರೀ ವೆಂಕಟಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 9 ಸಾವನ್ನಪ್ಪಿದ್ದಾರೆ.   ಕಾರ್ತಿಕಮಾಸದ ಸಮಯದಲ್ಲಿ 'ಏಕಾದಶಿ'ಯ ಕಾರಣ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಅಧಿಕಾರಿಗಳಿಗೆ ನಿಯಂತ್ರಿಸಲು ಸಾಧ್ಯವಾಗದೆ ಕಾಲ್ತುಳಿತ ಸಂಭವಿಸಿದೆ.  ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕಾಲ್ತುಳಿತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

andhra stamepede02


ಆಂಧ್ರಪ್ರದೇಶದಲ್ಲಿ ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದ ಆವರಣದಲ್ಲೂ ಕಾಲ್ತುಳಿತ ಸಂಭವಿಸಿತ್ತು. ಈಗ ಮತ್ತೆ ಶ್ರೀಕಾಕುಳಂ ಜಿಲ್ಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ದೇವಸ್ಥಾನದ ಬಳಿ ಸಾವಿರಾರು ಜನರು, ಭಕ್ತಾದಿಗಳು ಬಂದಾಗ ನಿಯಂತ್ರಿಸುವ ಸರಿಯಾದ ವ್ಯವಸ್ಥೆ ಇಲ್ಲದೇ ಇರುವುದರಿಂದ ಅಮಾಯಕ ಭಕ್ತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.  ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಇಬ್ಬರೂ ಆಸ್ತಿಕರು. ಹಿಂದೂ ಧರ್ಮದ ಬಗ್ಗೆ ಶ್ರದ್ದೆ, ನಂಬಿಕೆ, ಭಕ್ತಿ ಹೊಂದಿದ್ದಾರೆ. ಆದರೇ, ರಾಜ್ಯದ ದೇವಸ್ಥಾನಗಳಲ್ಲಿ ಸಂಭವಿಸುವ ಕಾಲ್ತುಳಿತ ಘಟನೆಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. 

andhra stamepede


Advertisment



ಶ್ರೀಕಾಕುಳಂ ಕಾಲ್ತುಳಿತ ದುರಂತದ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟ್ವೀಟ್ ಮಾಡಿದ್ದಾರೆ. ಜನರ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ನಡೆಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. 

stampede at srikakulam venkateshwara temple
Advertisment
Advertisment
Advertisment