Advertisment

ಶಾಸಕ ವಿನಯ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿಂದ ಜಾಮೀನು ಮಂಜೂರು

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕೊಲೆ ಕೇಸ್ ವಿಚಾರಣೆಯನ್ನು ಮುಂದಿನ 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.

author-image
Chandramohan
MLA VINAY KULKARNI

ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು

Advertisment
  • ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಮಂಜೂರು
  • ಸುಪ್ರೀಂಕೋರ್ಟ್ ಜಾಮೀನು ಮಂಜೂರು
  • ಕೊಲೆ ಕೇಸ್ ವಿಚಾರಣೆಯನ್ನು 2 ತಿಂಗಳಲ್ಲಿ ಮುಗಿಸುವಂತೆ ಸುಪ್ರೀಂಕೋರ್ಟ್ ನಿಂದ ಸೂಚನೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಸುಪ್ರೀಂಕೋರ್ಟ್ ನ ಜಸ್ಚೀಸ್ ಸಂಜಯ್ ಕರೋಲ್ ಅವರ ಪೀಠವು ಜಾಮೀನು ಮಂಜೂರು ಮಾಡಿದೆ. ಕೊಲೆ ಕೇಸ್ ವಿಚಾರಣೆಯನ್ನು ಮುಂದಿನ 2 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.  ವಿನಯ ಕುಲಕರ್ಣಿಗೆ ಸಾಕ್ಷ್ಯನಾಶ ಮಾಡಿದ ಆರೋಪದ ಹಿನ್ನಲೆಯಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿತ್ತು. ಹೀಗಾಗಿ ವಿನಯ ಕುಲಕುರ್ಣಿ ಕೋರ್ಟ್ ಗೆ ಶರಣಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.  
ಈಗ ಮತ್ತೆ ಸುಪ್ರೀಂಕೋರ್ಟ್ ನಿಂದ ಶಾಸಕ ವಿನಯ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. 

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

MLA VINAY KULKARNI GOT BAIL IN MURDER CASE
Advertisment
Advertisment
Advertisment