/newsfirstlive-kannada/media/media_files/2025/11/03/rr_bus-2025-11-03-07-13-02.jpg)
ಜೈಪುರ್: ನಿಲ್ಲಿಸಿದ್ದ ಟ್ರಕ್​ಗೆ ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ಮಿನಿ ಬಸ್ ಭಯಾನಕವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 15 ಯಾತ್ರಿಗಳು ಪ್ರಾಣ ಬಿಟ್ಟಿದ್ದಾರೆ. ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾಟೊಡಾ ಗ್ರಾಮದ ಬಳಿಯ ಭಾರತ್ ಮಾಲಾ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ದೇವರ ದರ್ಶನ ಪಡೆದು ವಾಪಸ್ ಆಗುತ್ತಿದ್ದ ಟೆಂಪೋ ಟ್ರಾವೆಲರ್ ಮಿನಿ ಬಸ್​ನಲ್ಲಿದ್ದ 15 ಜನರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಇವರೆಲ್ಲರೂ ಜೋಧಪುರದ ಸುರಸಾಗರ್ ಪ್ರದೇಶದವರು ಆಗಿದ್ದು ಬಿಕೇನರ್​ನಲ್ಲಿನ ಕೊಲಾಯತ್ ದೇವಾಲಯದ ಕಪಿಲ್​ ಮುನಿ ಆಶ್ರಾಮದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುತ್ತಿದ್ದರು. ಆದರೆ ಹೆದ್ದಾರಿಯಲ್ಲಿ ಬರುವಾಗ ನಿಂತಿದ್ದ ಟ್ರಕ್​ಗೆ ಬಸ್​ ಭೀಕರವಾಗಿ ಡಿಕ್ಕಿ ಹೊಡೆದಿದ್ದರಿಂದ ಭಕ್ತರು ಸಾವನ್ನಪ್ಪಿದ್ದಾರೆ.
/filters:format(webp)/newsfirstlive-kannada/media/media_files/2025/11/03/rr_bus_1-2025-11-03-07-13-12.jpg)
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಬ್ಬರು ಮಹಿಳೆಯರನ್ನು ಒಸಿಯಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಿದ್ದರಿಂದ ಬಳಿಕ ಜೋಧಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ಬಸ್ ಒಳಗೆ ಎಲ್ಲರೂ ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಸಮಯ ಬೇಕಾಯಿತು. ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ ಎಂದು ಹೇಳಲಾಗಿದೆ.
ಸ್ಥಳೀಯರು ಹಾಗೂ ಪೊಲೀಸರು ರಕ್ಷಣೆ ಕಾರ್ಯದಲ್ಲಿ ತೊಡಗಿ ಎಲ್ಲರನ್ನು ಹೊರಗೆ ತರಲಾಯಿತು. 15 ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಈ ಸಂಬಂಧ ರಾಜಸ್ತಾನ ಸಿಎಂ ಭಜನ್ ಲಾಲ್ ಶರ್ಮಾ ಸಂತಾಪ ಸೂಚಿಸಿದ್ದಾರೆ. ಇದು ಅತ್ಯಂತ ದುಃಖಕರ ಹಾಗೂ ಹೃದಯ ವಿದ್ರಾವಕ ಘಟನೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us