/newsfirstlive-kannada/media/media_files/2026/02/22/swami-avimukteshwaranand-saraswat-2026-02-22-10-49-12.jpg)
ಪ್ರಖ್ಯಾತ ಧಾರ್ಮಿಕ ಮುಖಂಡ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ (Swami Avimukteshwaranand Saraswati) ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಆಶ್ರಮದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ವಾಮೀಜಿ ಹಾಗೂ ಅವರ ಶಿಷ್ಯನ ವಿರುದ್ಧ ಎಫ್‌ಐಆರ್ (FIR) ದಾಖಲಿಸುವಂತೆ ಪ್ರಯಾಗರಾಜ್‌ನ ವಿಶೇಷ ನ್ಯಾಯಾಲಯ ಪೊಲೀಸರಿಗೆ ಆದೇಶ ನೀಡಿದೆ.
ಏನಿದು ಪ್ರಕರಣ?
ವಾರಣಾಸಿಯ ವಿದ್ಯಾಮಠದಲ್ಲಿರುವ ಗುರುಕುಲದಲ್ಲಿ ‘ಗುರು ಸೇವೆ’ಯ ನೆಪದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಶಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು.
ಅರ್ಜಿದಾರರು ನ್ಯಾಯಾಲಯಕ್ಕೆ ಸಿಡಿ (CD) ಒಂದನ್ನು ಸಾಕ್ಷಿಯಾಗಿ ಸಲ್ಲಿಸಿದ್ದು, ಅವಿಮುಕ್ತೇಶ್ವರಾನಂದ ಸ್ವಾಮೀಜಿ ಮತ್ತು ಅವರ ಶಿಷ್ಯಂದಿರು ಅನಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಪ್ರಯಾಗರಾಜ್ ವಿಶೇಷ ಕೋರ್ಟ್, ಇದೀಗ ಸ್ವಾಮೀಜಿ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲು ಸೂಚಿಸಿದೆ.
ಸ್ವಾಮೀಜಿ ಸ್ಪಷ್ಟನೆ ಏನು?
ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ತಳ್ಳಿಹಾಕಿದ್ದಾರೆ. ಇದು ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ. ನಾನು ಸರ್ಕಾರದ ಕೆಲವು ನಿಲುವುಗಳ ವಿರುದ್ಧ ಮಾತನಾಡಿದ್ದಕ್ಕೆ ಮತ್ತು ಗೋವುಗಳ ರಕ್ಷಣೆಗಾಗಿ (Cow Protection) ಧ್ವನಿ ಎತ್ತಿದ್ದಕ್ಕಾಗಿ ನನ್ನನ್ನು ಗುರಿಯಾಗಿಸಿಕೊಂಡು ಈ ರೀತಿ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಸದ್ಯ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದು, ಈ ಪ್ರಕರಣ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ: ನಟಿ ಕಾವ್ಯಗೌಡ vs ವಾರಗಿತ್ತಿ ಕಲಹ: ಸಿಸಿಟಿವಿ ಮೂಲಕ ‘ಅಸಲಿ ಸತ್ಯ’ ಬಿಚ್ಚಿಟ್ಟ ನಟಿ! VIDEO
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us